ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ದಲಿತಮತ ಬಹಿಷ್ಕಾರ ಎಚ್ಚರಿಕೆ

Mainashree
Updated On : 5 Jan 2014, 11:18 am

ಕ.ಪ್ರ. ವಾರ್ತೆ  ಕೊರಟಗೆರೆ  ಜ. 5
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ದಲಿತ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಉಪ ಮುಖ್ಯ ಮಂತ್ರಿ ಸ್ಥಾನ ನೀಡದಿದ್ದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಡಗೈ ಮತ್ತು ಬಲಗೈ ಜನಾಂಗದ ದಲಿತ ಮತಗಳ ಬಹಿಷ್ಕಾರ ಹಾಕುವುದಾಗಿ ಕಾಂಗ್ರೆಸ್ ಮುಖಂಡ ಹಾಗೂ ತಾಲೂಕು ಆದಿಜಾಂಬವ ಸಂಘದ ಅಧ್ಯಕ್ಷ ಎನ್. ಚಿಕ್ಕರಂಗಯ್ಯ ತಿಳಿಸಿದ್ದಾರೆ.
ಅವರು ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಡಾ.ಜಿ.ಪರಮೇಶ್ವರ್ ಅವರಿಗೆ ಡಿಸಿಎಂ ಸ್ಥಾನ ನೀಡುವಂತೆ ಪ್ರತಿಭಟನೆ ನಡೆಸಿ ನಂತರ ಕರಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.
ರಾಜ್ಯದಲ್ಲಿ ಅನೇಕ ಮುಖಂಡರ ಶ್ರಮದೊಂದಿಗೆ ದಲಿತ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಹೋರಾಟದಿಂದ ಕಾಂಗ್ರೆಸ್ ಪಕ್ಷ ಎಡಗೈ ಮತ್ತು ಬಲಗೈ ಜನಾಂಗದ ಒಗ್ಗಟ್ಟಿನ ಮತಗಳು ವರದಾನವಾಗಿ ಪಕ್ಷ ಅಧಿಕಾರಕ್ಕೆ ಬಂತು. ಆದರೆ ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸಿದ ಡಾ.ಜಿ. ಪರಮೇಶ್ವರ್ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿತವಾದ ಹಿನ್ನೆಲೆಯಲ್ಲಿ ತಮ್ಮ ಕ್ಷೇತ್ರದಲ್ಲಿ ಕೆಲ ಕಾಂಗ್ರೆಸ್ ಪಕ್ಷದ ನಾಯಕರ ಕುತಂತ್ರ ರಾಜಕೀಯದಿಂದ ಸೋಲು ಅನುಭವಿಸ ಬೇಕಾಯಿತು.
ಚುನಾವಣಾ ಸಂದರ್ಭದಲ್ಲಿ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಯುವ ನಾಯಕ ರಾಹುಲ್ ಗಾಂಧಿಯವರು ಬಿಂಬಿಸಿದ್ದ ಹಿನ್ನೆಲೆಯಲ್ಲಿ ಡಾ.ಜಿ.ಪರಮೇಶ್ವರ್ ಅವರ ಸೋಲಿಗೆ ಕಾರಣವಾಗಿದೆ ಎಂದು ತಿಳಿದಿರುವ ಅವರು ಲೋಕಸಭಾ ಚುನಾವಣೆಯಲ್ಲಿ ಮತ್ತೆ ದಲಿತರ ಮತ ಬೇಕಾದಲ್ಲಿ ದಲಿತ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡ ಬೇಕು ತಪ್ಪಿದಲ್ಲಿ ಪಕ್ಷಕ್ಕೆ ದಲಿತ ಮತಗಳು ಬಹಿಷ್ಕರಿಸುವುದಾಗಿ ತಿಳಿಸಿದರು.
ದಲಿತ ಮುಖಂಡರಾದ ನರಸಿಂಹಮೂರ್ತಿ, ನಾಗರಾಜು, ಕ್ಯಾಶವಾರ ನಾಗರಾಜು, ವೆಂಕಟೇಶಮೂರ್ತಿ, ನರಸಿಂಹಯ್ಯ, ಹನುಮಯ್ಯ, ಜಯಣ್ಣ, ಬಸವರಾಜು, ರಂಗರಾಜು, ದೊಡ್ಡಯ್ಯ, ಅಂಜನಪ್ಪ, ಮಾಜಿ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ನಟರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement