ಗಣರಾಜ್ಯೋತ್ಸವ ಪೂರ್ವಭಾವಿ ಸಭೆ
ಮಂಡ್ಯ: ಜನವರಿ 26 ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಲು ನಿರ್ಣಯ ಕೈಗೊಂಡರು.
ಅಧಿಕಾರಿಗಳಿಗೆ ಸೂಚನೆ: ಗಣರಾಜ್ಯೋತ್ಸವದ ಅಂಗವಾಗಿ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣವನ್ನು ಸಿದ್ಧಗೊಳಿಸುವುದು. ಅಂದು ಶಾಲಾ ಮಕ್ಕಳಿಂದ ರಾಷ್ಟ್ರಗೀತೆ ಹಾಡಿಸಲು ಅಗತ್ಯಕ್ರಮ ಕೈಗೊಳ್ಳಬೇಕು. ಗಣರಾಜೋತ್ಸವದ ಅಂಗವಾಗಿ ನಗರದ ಎಲ್ಲಾ ಪುತ್ಥಳಿಕೆಗೆ ಮಾಲಾರ್ಪಣೆ ಮಾಡುವುದು, ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಸೂಕ್ತ ಕ್ರಮವಹಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ವೇದಿಕೆ ನಿರ್ಮಾಣ, ಸ್ವಚ್ಚತೆಯ ಬಗ್ಗೆ ನಗರಸಭೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳಬೇಕು. ಅಂದು ಉತ್ತಮ ಸೇವೆಗೈದ ವಾಹನ ಚಾಲಕರಿಗೆ, ನಿರ್ವಹಕರಿಗೆ, ಪೌರ ಕಾರ್ಮಿಕರು, ಹಮಾಲಿಗಳನ್ನು ಗುರುತಿಸಿ ಗೌರವಿಸುವ ಬಗ್ಗೆ ಸಭೆಯಲ್ಲಿ ತಿರ್ಮಾನಿಸಲಾಯಿತು.
ಸಮಾರಂಭಕ್ಕೆ ಆಗಮಿಸುವ ಗಣ್ಯರಿಗೆ ಸಾರ್ವಜನಿಕರಿಗೆ ಉತ್ತಮ ಆಸನಗಳ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳಿಗೆ ಸಿಹಿ ತಿನಿಸು, ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರೆ ತಿಳಿಸಲಾಯಿತು.
ಸಭೆಯಲ್ಲಿ ಪೋಲಿಸ್ ವರಿಷ್ಠಾಧಿಕಾರಿ ಭೂಷಣ ಜಿ. ಬೋರಸೆ, ಜಿಲ್ಲಾ ಪಂಚಾಯ್ತಿ ಸಿಇಓ ಪಿ.ಸಿ. ಜಯಣ್ಣ, ಉಪವಿಭಾಗಧಿಕಾರಿ ಶಾಂತಾ ಎಲ್. ಹುಲ್ಮನಿ, ತಹಸೀಲ್ದಾರ್ ಡಾ. ಬಿ.ಕೆ. ಮಮತಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.