ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಗ್ರಾಮೀಣರಲ್ಲಿ ಪ್ರಗತಿಪರತೆ ಮೊಳಗಲಿ

Vishwanath S
Updated On : 10 Jan 2014, 12:57 pm

ಚೇಳೂರು: ಜನರು ದೇವಾಲಯಗಳನ್ನು ಜೀರ್ಣೋದ್ಧಾರ ಮಾಡುವುದ ಜೊತೆಗೆ ಆ ದೇವರಿಗೆ ಪ್ರತಿನಿತ್ಯ ಪೂಜ್ಯ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದು ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಪ್ರವೀಣ್‌ಕುಮಾರ್  ಅಭಿಪ್ರಾಯಪಟ್ಟರು.  
ಚೇಳೂರು ಹೋಬಳಿಯ ದೊಡ್ಡವೀರನಹಳ್ಳಿ ಗ್ರಾಮದಲ್ಲಿ ಶ್ರೀಕ್ಷೇತ್ರಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ದೇವಾಲಯ ಜೀರ್ಣೋದ್ಧಾರ ಸಮಿತಿಗೆ ಚೆಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  ಗ್ರಾಮೀಣ ಭಾಗದ ಜನರನ್ನು ಉತ್ತಮ ಮಾರ್ಗದಲ್ಲಿ ನಡೆದುಕೊಂಡು ಹೋಗುವಂತೆ ಮಾರ್ಗದರ್ಶನ ನೀಡಲು ನಮ್ಮ ಸಂಸ್ಥೆಯ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ನಮ್ಮ ಸಂಘದ ಸದಸ್ಯರಿಗೆ ಮಾರ್ಗದರ್ಶನ ನೀಡಿ ಜನರನ್ನು ಉತ್ತಮ ಮಾರ್ಗದಲ್ಲಿ ನಡೆಯುವಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಂಸ್ಥಾಪಕ ಡಾ. ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ ಸಂಸ್ಥೆ ಕಳೆದ 32 ವರ್ಷಗಳಿಂದ ಸೇವೆ ಸಲ್ಲಿಸುತ್ತಿದೆ. ಒಟ್ಟು ರಾಜ್ಯದ 22 ಜಿಲ್ಲೆಗಳಲ್ಲಿ ಸಂಘಗಳನ್ನು ಸ್ಥಾಪಿಸಿದೆ. ತುಮಕೂರು ಜಿಲ್ಲೆಯಲ್ಲಿ 3 ವರ್ಷಗಳಿಂದ ಸಂಘಗಳನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಜನರಿಗೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಕೃಷಿ ಚಟುವಟಿಕೆ, ಹಾಲು ಉತ್ಪಾದಕರ ಕಟ್ಟಡ, ದೇವಾಲಯಗಳು, ಶಾಲೆಗಳಿಗೆ ತಡೆಗೋಡೆ, ನಿರ್ಮಾಣಗಳಿಗೆ ಸಂಸ್ಥೆಯ ವತಿಯಿಂದ ಸಹಾಯದನ ನೀಡಲಾಗಿದೆ ಎಂದರು.
ಗ್ರಾಪಂ ಸದಸ್ಯ ಬಸವರಂಗಧಾಮಯ್ಯ, ಗ್ರಾಪಂ ಮಾಜಿ ಅಧ್ಯಕ್ಷ ಬಸವರಾಜು, ಎಸ್‌ಡಿಎಂಸಿ ಅಧ್ಯಕ್ಷ  ಜಯಣ್ಣ, ಕೆಂಪರಾಜು, ಪುಟ್ಟರಂಗಯ್ಯ,ರಂಗಧಾಮಯ್ಯ, ಒಕ್ಕೂಟದ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಸೇವಾ ಪ್ರತಿನಿಧಿ ರಾಜಣ್ಣ ಕೆ.ಟಿ. ಸಿದ್ದಪ್ಪ, ವಲಯ ಮೇಲ್ವಿಚಾರಕ ಹರೀಶ್ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement