ಮಧುಗಿರಿ: ತಾಲೂಕು ಮಟ್ಟದ ಕಲಿಕೋತ್ಸವ
ಮಧುಗಿರಿ: ಪೋಷಕರು ಆಂಗ್ಲಭಾಷಾ ವ್ಯಾಮೋಹಕ್ಕೆ ಒಳಗಾಗದೇ ಮಕ್ಕಳಿಗೆ 1 ರಿಂದ 5 ನೇ ತರಗತಿವರೆಗೆ ಮಾತೃ ಭಾಷೆ ಕನ್ನಡದಲ್ಲಿ ಕಡ್ಡಾಯ ಶಿಕ್ಷಣ ಕಲಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಡಿಡಿಪಿಐ ಟಿ.ಎಸ್.ಆಂಜನಪ್ಪ ಕಿವಿಮಾತು ಹೇಳಿದರು.
ಪಟ್ಟಣದ ಮಾಲೀ ಮರಿಯಪ್ಪ ರಂಗಮಂದಿರದಲ್ಲಿ ಸಾ.ಶಿ.ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಏರ್ಪಡಿಸಿದ್ದ ತಾಲೂಕು ಮಟ್ಟದ ಕಲಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ತಾಪಂ ಅಧ್ಯಕ್ಷೆ ಸುನಂದ ಸಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯೆ ಸುಮನಾ,ಪುರಸಭೆ ಉಪಾಧ್ಯಕ್ಷೆ ಜುಬೇದಬಾನು, ಸದಸ್ಯೆ ಶ್ರೀದೇವಿ, ಬಿಇಒ ವೈ.ಎನ್.ರಾಮಕೃಷ್ಣಯ್ಯ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎನ್.ಹನುಮಂತರಾಯಪ್ಪ, ವೆಂಕಟೇಶ್, ಗಂಗಹನುಮಯ್ಯ, ರಂಗಧಾಮಯ್ಯ, ಸಿ.ರಾಮಣ್ಣ ಮತ್ತಿತರರು ಉಪಸ್ಥಿತರಿದ್ದರು.