ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಶಿಕ್ಷಕರ ಸಭಾಂಗಣಕ್ಕೆ ಶಾಸಕರ ನಿಧಿಯಿಂದ ಅನುದಾನ ಭರವಸೆ

Vishwanath S
Updated On : 10 Jan 2014, 12:58 pm

ಕ.ಪ್ರ. ವಾರ್ತೆ ,  ಪಾವಗಡ ,  ಜ. 9
ಪ್ರೌಢಶಾಲಾ ಶಿಕ್ಷಕರ ಸಭಾಂಗಣಕ್ಕೆ ಶಾಸಕರ ನಿಧಿಯಿಂದ 10ಲಕ್ಷ ಅನುದಾನ ನೀಡುವುದಾಗಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಅವರು ಭರವಸೆ ನೀಡಿದರು.
ಜಿಲ್ಲಾ ಪಂಚಾಯಿತಿ ತುಮಕೂರು, ತಾಲೂಕು ಪಂಚಾಯಿತಿ ಪಾವಗಡ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಮಧುಗಿರಿ ಹಾಗೂ ತಾ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪಾವಗಡ ಮತ್ತು ತಾ,ಪ್ರೌಢಶಾಲೆಗಳ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಪಟ್ಟಣದ ಎಸ್‌ಎಸ್‌ಕೆ ಬಯಲು ರಂಗಮಂದಿರದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಏರ್ಪಡಿಸಿದ್ದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮ ಪಡಿಸುವ ಕಾರ್ಯಗಾರದ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಶಿಕ್ಷಕರು ಅದರ್ಶ  ಪಾಲಿಸಬೇಕು. ಗ್ರಾಮೀಣ ಬಡ ವಿದ್ಯಾರ್ಥಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಮಾರ್ಗದರ್ಶನ ಹಾಗೂ ಪ್ರೋತ್ಸಾಹಿಸುವ ಮೂಲಕ ಉತ್ತಮ ವಿದ್ಯಾರ್ಥಿಗಳಾನ್ನಾಗಿ ರೂಪಿಸಬೇಕಿದೆ ಎಂದರು. ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಒಂದು ಉತ್ತಮ ಘಟ್ಟವಾಗಿದ್ದು ಅದು ವಿದ್ಯಾರ್ಥಿಯ ಭವಿಷ್ಯ ಹಾಗೂ ಆತನ ಜೀವನ ತಿರುವಿನ ಮಹತ್ತರ ಘಟ್ಟ. ಈ ಘಟ್ಟದಲ್ಲಿ ಉತ್ತಮ ವಿದ್ಯಾವಂತರನ್ನಾಗಿ ರೂಪಿಸಿ ಅತಿ ಹೆಚ್ಚು ಆಂಕಗಳು ಪಡೆಯುವ ನಿಟ್ಟಿನಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಶಿಕ್ಷಣ ರೂಪಿಸಬೇಕಿದೆ. ಅಲ್ಲದೇ ಸ್ವರ್ಧಾತ್ಮಕ ಯುಗದಲ್ಲಿ ಶಿಕ್ಷಕರಿಗೂ ಮತ್ತು ಪೋಷಕರಿಗೆ ಮಹತ್ತರ ಜವಾಬ್ದಾರಿ ಇದ್ದು ಬಡತನ ಅಡ್ಡಿಬಾರದಂತೆ ಶಿಕ್ಷಣ ರೂಪಿಸಿ ಹೆಚ್ಚು ಆಂಕಗಳನ್ನು ಪಡೆಯಲು ಪ್ರೋತ್ಸಾಹಿಸಬೇಕಿದೆ ಎಂದ ಅವರು ಸರ್ಕಾರದ ಸೌಲಭ್ಯ ಸದುಪಯೋಗ ಸೇರಿದಂತೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಎಲ್ಲರೂ ನೆರವಾಗುವಂತೆ ಕರೆ ನೀಡಿದರು.
ಮಧುಗಿರಿ ಉಪ ನಿರ್ದೇಶಕರ ಕಚೇರಿಯ ಬಿಇಒ ಮಂಜುನಾಥ್ ಕಾರ್ಯಗಾರ ಕುರಿತು ಮಾತನಾಡಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಬಂದಿದ್ದ ಶಾಲಾ ಮುಖ್ಯೋಪಾದ್ಯಾಯರನ್ನು ಸನ್ಮಾನಿಸಿದರು.
ತಾಪಂ ಅಧ್ಯಕ್ಷೆ ರಾಧಾರಾಜ್‌ಗೋಪಾಲ್  ಸೇರಿದಂತೆ ಅನೇಕ ಮಂದಿ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement