ಮಕ್ಕಳಲ್ಲಿ ನೆನಪಿನ ಶಕ್ತಿ ವೃದ್ಧಿಗೆ ಕಲಿಕೋತ್ಸವ ಅಮೂಲ್ಯ ವೇದಿಕೆ
ಕೊರಟಗೆರೆ: ವಿದ್ಯಾರ್ಥಿಗಳು ಶಾಲಾ ಕೊಠಡಿಯಲ್ಲಿ ಕಲಿತ ಪಾಠವನ್ನು ಶಾಲಾ ಹೊರಗೂ ಅದನ್ನೇ ಆಧರಿಸಿ ಪಠ್ಯೇತರ ಚಟುವಟಿಕೆಗಳ ರೂಪದಲ್ಲಿ ಕಲಿತು ಪ್ರದರ್ಶಿಸುವ ಮೂಲಕ ಮಕ್ಕಳಲ್ಲಿ ನೆನಪಿನ ಶಕ್ತಿ ಹೆಚ್ಚಾಗುವುದಕ್ಕೆ ಕಲಿಕೋತ್ಸವ ಅತ್ಯಂತ ಅಮೂಲ್ಯ ವೇದಿಕೆಯಾಗಿದೆ ಎಂದು ಮಾಜಿ ಜಿ.ಪಂ.ಸದಸ್ಯೆ ಪ್ರೇಮಾ ಮಹಾಲಿಂಗಪ್ಪ ತಿಳಿಸಿದರು.
ಅವರು ಪಟ್ಟಣದ ಗುರುಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಏರ್ಪಡಿಸಿದ್ದ ತಾಲೂಕು ಮಟ್ಟದ ಕಲಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳು ಭಾಗವಹಿಸುವುದರಿಂದ ಹೆಚ್ಚಿನ ಜ್ಞಾನಾಭಿವೃದ್ಧಿ ಲಭಿಸುತ್ತದೆ. ಜೊತೆಗೆ ಮಕ್ಕಳಲ್ಲಿ ವಾಕ್ ಚಾತುರ್ಯ ಹೆಚ್ಚುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿ ಇಂತಹ ಕಾರ್ಯಕ್ರಮಗಳಲ್ಲಿ ಸಂಕೋಚ, ನಿರ್ಭೀತಿ ತೊರೆದು ಭಾಗವಹಿಸಬೇಕು ಎಂದರು.
ಜಿ.ಪಂ.ಸದಸ್ಯೆ ದಾಕ್ಷಾಯಿಣಿ ರಾಜಣ್ಣ ಮಾತನಾಡಿ ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿನ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತದ್ದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದ್ದು ಪಠ್ಯ ವಿಷಯವನ್ನೆ ಮನರಂಜನೆ ಮೂಲಕ ವಿದ್ಯಾರ್ಥಿಗಳಲ್ಲಿ ಕಲಿಸಲು ಸ್ಫೂರ್ತಿ ತುಂಬುವ ಮೂಲಕ ಅವರನ್ನು ಉತ್ತಮ ಪ್ರಜೆಗಳನಾಗಿಸುಲು ಸಾಧ್ಯ ಎಂದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೀರಕ್ಯಾತರಾಯ ಮಾತನಾಡಿ ಶಾಸಗಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರಿಗಿಂತ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತಿರುವ ಶಿಕ್ಷಕರು ಪ್ರತಿಭಾವಂತರಾಗಿದ್ದು ಅವರು ಹೆಚ್ಚಿನ ಅಂಕಗಳಿಸಿದ ಆದಾರದ ಮೇಲೆ ಸರ್ಕಾರ ನೇಮಕ ಮಾಡಲಾಗಿದೆ. ಸರ್ಕಾರ ಶಾಲೆಗಳಿಗೆ ನೀಡುತ್ತಿರುವ ಸೌಲಭ್ಯಗಳನ್ನು ಉಪ ಯೋಗಿಸಿ ಕೊಂಡು ಖಾಸಗಿ ಶಾಲೆಗಳಿಗೆ ಸವಾಲ್ ಹಾಕುವ ಮೂಲಕ ಪ್ರತಿಭಾನ್ವಿತ ಮಕ್ಕಳನ್ನು ರೂಪಿಸಿ ಉತ್ತಮ ಫಲಿತಾಂಶ ತರುವ ನಿಟ್ಟಿನಲ್ಲಿ ಯಶಸ್ವಿಯಾಗುತ್ತಿದ್ದಾರೆ ಎಂದರು.