ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ ಅನುಷ್ಠಾನ ಸಮಿತಿ ಸಭೆ

Vishwanath S
Updated On : 11 Jan 2014, 1:18 am

ತುಮಕೂರು: ಅಸಂಘಟಿತ ವಲಯದ ಕಾರ್ಮಿಕರಿಗೆ ಜಾರಿಯಾಗಿರುವ ರಾಷ್ಟ್ರೀಯ ಸ್ವಾಸ್ಥ್ಯಬಿಮಾ ಯೋಜನೆಯ ಪಾಲಿಸಿ ಅವಧಿಯು ಆಗಸ್ಟ್ 31 ರಂದು ಮುಕ್ತಾಯವಾಗಿದ್ದು,  ಹೊಸದಾಗಿ ಫಲಾನುಭವಿ ಪಟ್ಟಿಯನ್ನು ಸಿದ್ಧಪಡಿಸುವ ಸಲುವಾಗಿ ಬೇರೆ ಬೇರೆ ಇಲಾಖೆಗಳಿಂದ ಮಾಹಿತಿ ಪಡೆದು ಅಂತಿಮವಾಗಿ ಅನುಮೋದನೆಗೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಅನುಮೋದನಾ ಪಟ್ಟಿ ಬಂದ ನಂತರ ನೋಂದಣಿ ಕಾರ್ಯವನ್ನು ಆರಂಭಿಸುವಂತೆ ಅಪರ ಜಿಲ್ಲಾಧಿಕಾರಿ ಪೆದ್ದಪ್ಪಯ್ಯ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯೋಜನೆಯ ಜಿಲ್ಲಾ ಅನುಷ್ಠಾನ ಸಮಿತಿಯ ಪ್ರಥಮ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅಪರ ಜಿಲ್ಲಾಧಿಕಾರಿ ಪೆದ್ದಪ್ಪಯ್ಯ ಅವರು ಮಾತನಾಡಿ, ಯೋಜನೆಯಡಿ ಹಳೆಯ ನೋಂದಣಿಯಾದಂತಹ ಆಸ್ಪತ್ರೆಗಳ ಜೊತೆಗೆ ಹೆಚ್ಚು ಸರ್ಕಾರಿ ಆಸ್ಪತ್ರೆಗಳನ್ನು ನೋಂದಣಿ ಮಾಡಲು ಮಹತ್ವ ನೀಡುವಂತೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನೋಂದಣಿ ಮಾಡಬಹುದೆ ಎಂಬುದನ್ನು ತಿಳಿದುಕೊಂಡು ಕಾರ್ಯೋನ್ಮುಖರಾಗುವಂತೆ ತಿಳಿಸಿದರು.
ಯೋಜನೆಯ ಫಲಾನುಭವಿಗಳ ಕುಟುಂಬಗಳಿಗೆ ಸ್ಮಾರ್ಟ್ ಕಾರ್ಡ್ ನೀಡಲು ರೂಟ್ ಮ್ಯಾಪ್ ತಯಾರಿಸಲು ಎಲ್ಲಾ ತಾಲೂಕುಗಳ ತಹಸೀಲ್ದಾರ್ ಬಳಿ ಚರ್ಚಿಸಿ ರೂಟ್ ಮ್ಯಾಪ್ ಅಂತಿಮಗೊಳಿಸುವಂತೆ ಅಪರ ಜಿಲ್ಲಾಧಿಕಾರಿಗಳು ಸಲಹೆ ನೀಡಿದರು. ಯೋಜನೆ ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳಲ್ಲಿ ಫೀಲ್ಡ್ ಕೀ ಆಫೀಸರ್ ನೇಮಕ ಮಾಡುವ ಕುರಿತು ಚರ್ಚಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿಯವರು ಸಭೆಗೆ ಮಾಹಿತಿ ನೀಡುತ್ತಾ, ತುಮಕೂರು ಜಿಲ್ಲೆಯಲ್ಲಿ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯು ಮಾ. 1, 2012 ರಲ್ಲಿ ಅನುಷ್ಠಾನಗೊಂಡಿದ್ದು, ಜಿಲ್ಲೆಯಲ್ಲಿ 2,19,077 ಫಲಾನುಭವಿಗಳನ್ನು ಗುರುತಿಸಿ ಇದರಲ್ಲಿ 1,17,508 ಫಲಾನುಭವಿ ಕುಟುಂಬಗಳಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗಿದೆ ಎಂದು ಅವರು ತಿಳಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement