ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಗುರಿ ಇದ್ದರೆ ಮಾತ್ರ ಗುರಿ ತಲುಪಲು ಸಾಧ್ಯ

Vishwanath S
Updated On : 13 Jan 2014, 1:16 am

ಕ.ಪ್ರ.ವಾರ್ತೆ ,  ಗುಬ್ಬಿ ,  ಜ.12
ಭಾರತೀಯ ವೇದಾಂತ ಪರಂಪರೆ ಮಹತ್ವ ಪೂರ್ಣವಾದುದಾಗಿದ್ದು ಯಾವುದೇ ಕ್ಷೇತ್ರದಲ್ಲಿ ಶ್ರೇಷ್ಠವಾದ ಗುರಿಯನ್ನಿಟ್ಟುಕೊಂಡು ಕಾರ್ಯವನ್ನು ಕೈಗೊಂಡಾಗ ಮಾತ್ರ ನಿರ್ದಿಷ್ಟ ಮತ್ತು ನಿರೀಕ್ಷಿತ ಗುರಿ ಸಾಧಿಸಲು ಸಾಧ್ಯ ಎಂದು ಶ್ರೀರಾಮಕೃಷ್ಣ ವಿವೇಕಾನಂದಾಶ್ರಮದ ಅಧ್ಯಕ್ಷರಾದ ಶ್ರೀವೀರೇಶಾನಂದ ಸರಸ್ವತಿ ಸ್ವಾಮೀಜಿ ಅಭಿಪ್ರಾಯಪಟ್ಟುರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸ್ವಾಮಿ ವಿವೇಕಾನಂದರ 150 ನೇ ಜನ್ಮ ಶತಮಾನೋತ್ಸವದ ಅಂಗವಾಗಿ ಶ್ರೀಚನ್ನಬಸವೇಶ್ವರ ಯುವಕ ಸಂಘ, ಜಿಲ್ಲಾ ಖೋ-ಖೋ ಸಂಸ್ಥೆ ಹಾಗೂ ಸ್ಥಳೀಯ ಸಂಘಸಂಸ್ಥೆಗಳ ಸಹಕಾರದೊಂದಿಗೆ ಮೂರು ದಿನಗಳ ಆಹ್ವಾನಿತ ರಾಜ್ಯ ಮಟ್ಟದ 22ನೇ ಪುರುಷ ಮತ್ತು ಮಹಿಳಾ ಹಾಗೂ ಅತಿ ಕಿರಿಯ ಬಾಲಕರ ಖೊ-ಖೊ ಪಂದ್ಯಾವಳಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಯಾವ ರಾಷ್ಟ್ರ ಕ್ರೀಡೆಗೆ ಪ್ರೋತ್ಸಾಹ ನೀಡುತ್ತದೆಯೋ ಆ ರಾಷ್ಟ್ರ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು.
ದೈಹಿಕ ಮತ್ತು ಮಾನಸಿಕ ನೆಮ್ಮದಿಗೆ ಕ್ರೀಡೆ ಹೆಚ್ಚು ಸಹಕಾರಿಯಾಗಲಿದ್ದು ಕ್ರೀಡೆ ಮತ್ತು ಆಧ್ಯಾತ್ಮಿಕ ಚಿಂತನೆಗಳಿಂದ ಪ್ರತಿಯೊಬ್ಬ ವ್ಯಕ್ತಿಯೂ ಆರೋಗ್ಯಕರವಾಗಿರಲು ಸಾಧ್ಯ ಎಂದ ಅವರು ಪುರಾತನ ಕಾಲದಿಂದಲೂ ಕ್ರೀಡೆ ಮಾನವನ ಬದುಕಿನಲ್ಲಿ ಹೊಸ ಆಯಾಮ ನೀಡುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಮತ್ತಷ್ಟು ಪ್ರಗತಿ ಪಥದತ್ತ ಕೊಂಡೊಯ್ಯುತ್ತಿವೆ. ಈ ನಿಟ್ಟಿನಲ್ಲಿ ಕ್ರೀಡಾಕೂಟಗಳು ಭಾವನಾತ್ಮಕವಾಗಿ ಮತ್ತು ಸ್ಪರ್ಧಾಮನೋಭಾವನೆಯಿಂದ ಕೂಡಿರಬೇಕೆಂದರು.
 ಶಿವಗಂಗೆ ಶ್ರೀಮಹಾಲಕ್ಷ್ಮೀ ಸಂಸ್ಥಾನದ ಶ್ರೀಜ್ಞಾನಾನಂದಪುರಿ ಸ್ವಾಮೀಜಿ, ತಾಲೂಕು ಪಂಚಾಯ್ತಿ ಅಧ್ಯಕ್ಷ ಕೆ.ಎನ್. ಬಾಲಕೃಷ್ಣ, ತಾಲೂಕು ಪಂಚಾಯ್ತಿ ಸದಸ್ಯ ಶಶಿಧರ್, ಜಿಲ್ಲಾ ಪಂಚಾಯ್ತಿ ಸದಸ್ಯ ಪಿ.ಬಿ.ಚಂದ್ರಶೇಖರಬಾಬು, ಪಟ್ಟಣ ಪಂಚಾಯ್ತಿ ಅಧ್ಯಕ್ಷರಾದ ಜಿ.ಡಿ.ಸುರೇಶ್ ಗೌಡ, ಸದಸ್ಯರಾದ ತ್ರಿವೇಣಿ, ಪ್ರೇಮಾ, ಹಿರಿಯ ಕ್ರೀಡಾ ಪಟು ನರಸಿಂಹರಾಜು, ಮುಖಂಡ ಜಿ.ವಿ. ರಂಗನಾಥ್, ಶ್ರೀಚನ್ನಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಕೆ.ಎಲ್. ಗೋಪಾಲಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಿ.ಆರ್. ಶಂಕರ್ ಕುಮಾರ್ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement