ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಯುವ ಜನತೆಗೆ ಸ್ವಾಮಿ ವಿವೇಕಾನಂದರು ಆದರ್ಶ

Vishwanath S
Updated On : 15 Jan 2014, 1:18 am

ಶಿರಾ: ನವಭಾರತ ನಿರ್ಮಾಣ ಮಾಡುವ ರೀತಿಯಲ್ಲಿ ಪ್ರೇರೇಪಣೆ ನೀಡಿದ ಸ್ವಾಮಿ ವಿವೇಕಾನಂದರನ್ನು ನೆನೆಯುವುದು ಇಂದಿನ ಪೀಳಿಗೆಗೆ ಅತೀ ಮುಖ್ಯವಾಗಿದೆ ಎಂದು ಮುಖ್ಯ ಶಿಕ್ಷಕಿ ಸರೋಜ ಅವರು ತಿಳಿಸಿದರು.
ಅವರು ನಗರದ ನ್ಯೂ ಪಬ್ಲಿಕ್ ಸ್ಕೂಲ್ ಹಾಗೂ ಸಿರಿಗನ್ನಡ ವೇದಿಕೆ ವತಿಯಿಂದ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ 151 ನೇ ಜನ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಯುವಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿಗನ್ನಡ ವೇದಿಕೆ ಅಧ್ಯಕ್ಷ ಶ್ರೀನಿವಾಸ ಮೂರ್ತಿ ಸಿ.ಜಿ. ವಹಿಸಿದ್ದರು. ಗೌರವ ಅಧ್ಯಕ್ಷರಾದ ಕಳ್ಳಂಬೆಳ್ಳ ಜಯರಾಂ, ರಾಜಗೋಪಾಲ್, ಮಹಾಲಕ್ಷ್ಮೀ, ಶಾಂತವೀರಪ್ಪ, ಸಂಘಟನಾ ಕಾರ್ಯದರ್ಶಿ ರಾಜಶೇಖರ್, ಉಪನ್ಯಾಸಕ ವಿ.ಎನ್.ಯತೀಶ್ ಮತ್ತಿತರರು ಭಾಗವಹಿಸಿದ್ದರು. ಅಗ್ರಹಾರದ ಟಿ.ಲೋಕೇಶ್ ಅವರು ಸ್ವಾಮಿ ವಿವೇಕಾನಂದರ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಶಾಂತವೀರಪ್ಪ ನಿರೂಪಿಸಿ, ಭರತ್ ಸ್ವಾಗತಿಸಿ, ಕಳ್ಳಂಬೆಳ್ಳ ಜಯರಾಂ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement