ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸಾರ್ವಜನಿಕ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಚುನಾವಣೆಗೆ ತೀರ್ಮಾನ

Vishwanath S
Updated On : 18 Jan 2014, 2:00 am

ಚನ್ನಪಟ್ಟಣ: ತಾಲೂಕಿನ ಸಾರ್ವಜನಿಕ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಚುನಾವಣೆಯನ್ನು ನಡೆಸಲು ತೀರ್ಮಾನಿಸಿದ್ದು ಸದ್ಯದಲ್ಲೇ ಚುನಾವಣೆ ದಿನಾಂಕ ನಿಗದಿ ಪಡಿಸುವುದಾಗಿ ಸಂಸ್ಥೆಯ ಕಾರ್ಯದರ್ಶಿ ಎ.ಆರ್.ರಾಜು ತಿಳಿಸಿದರು.
ಸಂಸ್ಥೆಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎನ್.ಎಸ್.ಗೌಡ ಅಧ್ಯಕ್ಷತೆಯಲ್ಲಿ ಚುನಾಯಿತವಾಗಿರುವ ಆಡಳಿತ ಮಂಡಳಿ ಸಂಸ್ಥೆಯನ್ನು ಸಮರ್ಥವಾಗಿ ಮುನ್ನಡೆಸುತ್ತಿದೆ. ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಸಂಘದ ಆಡಳಿತವನ್ನು ಮತ್ತಷ್ಟು ಚುರುಕುಗೊಳಿಸುವ ಉದ್ದೇಶದಿಂದ ಚುನಾವಣೆ ನಡೆಸುವ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದರು.
ಸಂಸ್ಥೆ ಅಧ್ಯಕ್ಷ ಎನ್.ಎಸ್.ಗೌಡ ಮಾತನಾಡಿ, ನನ್ನ ಅವಧಿಯಲ್ಲಿ ಪಾರದರ್ಶಕ ಆಡಳಿತ ನೀಡಿರುವ ತೃಪ್ತಿ ಇದೆ. ಸಂಸ್ಥೆಯನ್ನು ಇನ್ನಷ್ಟು ವಿಸ್ತಾರಗೊಳಿಸುವ ಉದ್ದೇಶದಿಂದ ಕೈಗಾರಿಕಾ ತರಬೇತಿ ಸಂಸ್ಥೆಯನ್ನೂ ಆರಂಭ ಮಾಡಲಾಗಿದೆ. ಇದು ಜಿಲ್ಲೆಯಲ್ಲಿಯೇ ಉತ್ತಮ ಹೆಸರು ಪಡೆದಿದೆ ಎಂದರು.
ಕಳೆದ ಸರ್ವ ಸದಸ್ಯರ ಸಭೆಯಲ್ಲಿ ಆಡಳಿತ ಮಂಡಳಿಯ ಚುನಾವಣೆ ನಡೆಸಿ ವಿದ್ಯಾಸಂಸ್ಥೆ ಬೆಳೆಸುವ ಉತ್ಸಾಹಿಗಳಿಗೆ ಅಧಿಕಾರ ನೀಡುವುದಾಗಿ ಘೋಷಣೆ ಮಾಡಿದ್ದೆವು. ಅದರಂತೆ ಇದೀಗ ಫೆಬ್ರವರಿ ಮಾಹೆಯಲ್ಲಿ ಚುನಾವಣೆ ನಡೆಸಲಾಗುವುದು ಎಂದರು.
ಸಹಕಾರ್ಯದರ್ಶಿ ಸಿಂ.ಲಿಂ.ನಾಗರಾಜು ಮಾತನಾಡಿ, ವಿದ್ಯಾಸಂಸ್ಥೆಯನ್ನು ಜನಮುಖಿಗೊಳಿಸುವ ಉದ್ದೇಶದಿಂದ ಸದಸ್ಯತ್ವ ಅಭಿಯಾನ ಆರಂಭಿಸಿ 3800 ಹೊಸ ಸದಸ್ಯರನ್ನು ನೋಂದಣಿ ಮಾಡಿಕೊಳ್ಳಲಾಗಿದೆ ಎಂದರು.
ಜೆ.ಸಿ.ರಸ್ತೆಯಲ್ಲಿ ಸಂಸ್ಥೆಗೆ ಸೇರಿದ ಅಂಗಡಿ ಮಳಿಗೆಗಳಿಂದ ನಿರೀಕ್ಷಿತ ಮಟ್ಟದಲ್ಲಿ ಆದಾಯ ಬರುತ್ತಿಲ್ಲ. ಈ ಹಿಂದೆ ಅಂಗಡಿ ಪಡೆದಿರುವವರು ಹಳೆಯ ಬಾಡಿಗೆ, ಮುಂಗಡ ಠೇವಣಿಯಲ್ಲಿಯೇ ಮುಂದುವರೆಯುತ್ತಿದ್ದಾರೆ. ಅಂಗಡಿಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದರೂ ತೆರವುಗೊಳಿಸದಿದ್ದರಿಂದ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿ, ತೀರ್ಪು ಸಂಸ್ಥೆಯ ಪರವಾಗಿಯೇ ಆಗಿದೆ. ಮುಂದಿನ ದಿನಗಳಲ್ಲಿ ತೆರವು ಕಾರ್ಯ ಕೈಗೊಂಡು ಹೊಸದಾಗಿ ವಿಲೇವಾರಿ ಮಾಡಿ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸುವ ಕಾರ್ಯವಾಗಬೇಕೆಂದರು.
ಸಂಸ್ಥೆಯ ಖಜಾಂಚಿ ಮಲ್ಲಯ್ಯ, ಸಹಕಾರ್ಯದರ್ಶಿ ರಾಜಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement