ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

'ಬಂಡೆ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ'

Vishwanath S
Updated On : 19 Jan 2014, 1:15 am

ತುಮಕೂರು: ದಕ್ಷ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಅವರ ಸಾವಿಗೆ ರಾಜ್ಯ ಸರ್ಕಾರವೇ ನೇರ  ಹೊಣೆ ಎಂದು ಜಯಕರ್ನಾಟಕ ಜಿಲ್ಲಾ ಕಾರ್ಯಾಧ್ಯಕ್ಷ ಸೋಮಶೇಖರ್ ಆರೋಪಿಸಿದರು.
ಅವರು ಕ್ಯಾತ್ಸಂದ್ರದ ಆಟೋ ನಿಲ್ದಾಣದ ಬಳಿ ಜಯಕರ್ನಾಟಕ ಆಟೋ ಘಟಕ ಆಯೋಜಿಸಿದ್ದ ಮಲ್ಲಿಕಾರ್ಜುನ ಬಂಡೆ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು
ಆಡಳಿತಾರೂಡ ಸರ್ಕಾರಗಳು ಪೊಲೀಸ್ ರಕ್ಷಣೆಗೆ ಸೂಕ್ತ ಕ್ರಮ ಕೈಗೊಂಡಿದ್ದರೆ ಇಂತಹ ಪರಿಸ್ಥಿತಿ ಸಂಭವಿಸುತ್ತಿರಲಿಲ್ಲ.  ಇದೀಗ ಸರ್ಕಾರಗಳ ನಿರ್ಲಕ್ಷತೆಯಿಂದ ಕನ್ನಡ ನಾಡು ದಕ್ಷ ಪೊಲೀಸ್ ಅಧಿಕಾರಿಯನ್ನು ಕಳೆದುಕೊಂಡಿದೆ. ಈ ಅನಾಹುತಕ್ಕೆ ಬೆಲೆ ಕಟ್ಟುವ ಶಕ್ತಿ ಸರ್ಕಾರಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು
ಕ್ಯಾತ್ಸಂದ್ರ ಪೊಲೀಸ್ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಚನ್ನಯ್ಯ ಹಿರೇಮಠ್, ಜಯಕರ್ನಾಟಕ ಆಟೋ ಘಟಕದ ಜಿಲ್ಲಾಧ್ಯಕ್ಷ ನಾಗೇಂದ್ರಪ್ಪ, ಪ್ರಚಾರ ಘಟಕದ ಜಿಲ್ಲಾಧ್ಯಕ್ಷ ಬಾಳಾರಾಧ್ಯ, ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಚಂದನ್, ಅಖಿಲ ಕರ್ನಾಟಕ ತೂಗುದೀಪ್ ದರ್ಶನ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ರಘು, ಅಖಿಲ ಭಾರತ ಸೇವಾ ಸಮಾಜ ಸಂಸ್ಥೆಯ ರಾಜ್ಯ ಉಪಾಧ್ಯಕ್ಷ ಕೆ.ಎಸ್. ಪ್ರಕಾಶ್, ಜಯಕರ್ನಾಟಕ ಸಂಘಟನೆಯ ಮುಖಂಡರಾದ ಹನುಮಂತರಾಜು, ಶಶಿ, ಕೃಷ್ಣ, ಆಟೋ ಘಟಕದ ಮುಖಂಡರಾದ ಇಮ್ತಿಯಾಜ್, ಆಂಜಿನಪ್ಪ ಸಿದ್ದಲಿಂಗಪ್ಪ ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ. ಕುಮಾರ್ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement