ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ: ಕೆ.ಷಡಕ್ಷರಿ

Vishwanath S
Updated On : 19 Jan 2014, 1:15 am

ತಿಪಟೂರು: ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ಉತ್ತಮ ಸ್ಥಾನಗಳನ್ನು ಪಡೆದುಕೊಂಡಿದ್ದು,ಪುರುಷರಷ್ಟೇ ಮಹಿಳೆಯರಿಗೂ ಸರಿಸಮಾನವಾದ ಸ್ವಾತಂತ್ರ್ಯ ಇದೆ ಎಂಬುದನ್ನು ಸಾಧಿಸಿ ತೋರಿಸಿದ್ದಾರೆಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
  ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿ ಸಂಘದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರು ಸಾಕಷ್ಟು ಪರಿಣಿತರಾಗಿದ್ದು, ಜೊತೆಗೆ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಪೋಷಕರ ಸಹಕಾರದಿಂದ ಮಕ್ಕಳು ಸತತ ಪರಿಶ್ರಮ ಪಟ್ಟು ಕಲಿತರೆ ದೇಶದ ಆಸ್ತಿಗಳಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ ಎಂದರು.
 ಸಂತ ಶಿಶುನಾಳ ಷರೀಪರ ಶಿವಯೋಗಿ ತತ್ವ ಪ್ರಚಾರಕ ಎಂ.ಸಿ.ನರಸಿಂಹಮೂರ್ತಿ ಮಾತನಾಡಿ ವಿದ್ಯಾಭ್ಯಾಸದ ಜೊತೆಗೆ ಆದರ್ಶ ವ್ಯಕ್ತಿಗಳ ವ್ಯಕ್ತಿತ್ವಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಬಿಇಓ ಪ್ರಭುಸ್ವಾಮಿ, ಪ್ರಾಂಶುಪಾಲ ಕೆ.ಎಸ್. ರಂಗನಾಥ್, ಉಪಪ್ರಾಂಶುಪಾಲ ಎಚ್.ಕೆ. ಸಿದ್ದರಾಜು ಮತ್ತಿತರರಿದ್ದರು.
 ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಸೈಕಲ್ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement