ಫಲಾನುಭವಿ ಆಯ್ಕೆ
ತುಮಕೂರು: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 2013-14 ನೇ ಸಾಲಿಗೆ ತ್ವರಿತ ಮೇವು ಅಭಿವೃದ್ಧಿ ಕಾರ್ಯಕ್ರಮದಡಿ ವಿವಿಧ ಸಾಮರ್ಥ್ಯದ ಮೇವು ಕತ್ತರಿಸುವ ಯಂತ್ರವನ್ನು ಉಚಿತವಾಗಿ ವಿತರಿಸುವ ಸಲುವಾಗಿ ಲಾಟರಿ ಎತ್ತುವ ಮೂಲಕ ಮಾರ್ಗಸೂಚಿಗಳ ಪ್ರಕಾರ ಫಲಾನುಭವಿಗಳ ಆಯ್ಕೆಯನ್ನು ಮಾಡಲಾಗುವುದು ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜನವರಿ 10 ರಂದು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಸಭೆಯನ್ನು ಕರೆಯಲಾಗಿದ್ದು, ಸದರಿ ಸಭೆಯ ನಿರ್ಣಯದಂತೆ ಫಲಾನುಭವಿಗಳನ್ನು ಆಯಾ ತಾಲೂಕಿನಲ್ಲಿ ಅರ್ಜಿದಾರರ ಸಮಕ್ಷಮದಲ್ಲಿ ಲಾಟರಿ ಎತ್ತುವ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಮೇವು ಕತ್ತರಿಸುವ ಯಂತ್ರಗಳನ್ನು ಉಚಿತವಾಗಿ ವಿತರಿಸುವ ಸಂಬಂಧ ಅಕ್ಟೋಬರ್ 28 ರಂದು ಅಂತಿಮ ದಿನಾಂಕ ನಿಗಧಿಪಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅದರಂತೆ ಎಲ್ಲಾ 10 ತಾಲೂಕುಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಉಪನಿರ್ದೇಶಕರು, ಪಶುಪಾಲನಾ ಇಲಾಖೆ, ಆಯಾ ತಾಲೂಕಿನ ಸಮಾಜ ಕಲ್ಯಾಣಾಧಿಕಾರಿ, ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, ಸಾರ್ವಜನಿಕರ ಸಮ್ಮುಖದಲ್ಲಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.