ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ರಸ್ತೆ ನಿಯಮ ಪಾಲಿಸಲು ಕರೆ

Rashmi Kasaragodu
Updated On : 23 Jan 2014, 2:04 am

ತುಮಕೂರು: ಮಕ್ಕಳಿಗೆ 18 ವರ್ಷ ತುಂಬಿದ ಮೇಲೆ ವಾಹನದ ಲೈಸೆನ್ಸ್ ಮಾಡಿಸಬೇಕೆಂದು ಉಪಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಪೋಷಕರಿಗೆ ಸಲಹೆ ನೀಡಿದರು.
ಅವರು ತುಮಕೂರು ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯಕ್ಕೆ ತುಮಕೂರು ಹೆಬ್ಬಾಗಿಲು ಇದ್ದ ಹಾಗೆ. ರಾಜ್ಯದ 22 ಜಿಲ್ಲೆಗಳಿಂದ ಬರುವ ಎಲ್ಲ ವಾಹನಗಳು ತುಮಕೂರಿನಿಂದಲೇ ಹೋಗುವುದು. ಹಾಗಾಗಿ ನಗರದಲ್ಲಿ ವಾಹನ ದಟ್ಟಣೆ ಹೆಚ್ಚು ಎಂದರು.
ಜಿಲ್ಲಾ ವಾಹನ ತರಬೇತಿ ಶಾಲೆಗಳ ಒಕ್ಕೂಟದ ಗೌರವಾಧ್ಯಕ್ಷ ಸದಾಶಿವಯ್ಯ ಮಾತನಾಡಿ, ಇಂದು ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಸವಾರರು ಜಾಗರೂಕತೆಯಿಂದ ವಾಹನ ಚಲಾಯಿಸಬೇಕೆಂದು ತಿಳಿಸಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಕುಬೇರಪ್ಪ ಮಾತನಾಡಿ, ಸಾರ್ವಜನಿಕರು ರಸ್ತೆ ನಿಯಮಗಳನ್ನು ಸರಿಯಾಗಿ ಪಾಲಿಸಬೇಕೆಂದು ತಿಳಿಸಿದರು. ವಾಮದೇವರು, ಮೋಟಾರು ವಾಹನ ಚಾಲನ ತರಬೇತಿ ಶಾಲೆಗಳ ಅಧ್ಯಕ್ಷ ಡಿ.ಶಿವಕುಮಾರ್ ಹಾಗೂ ವಾಹನ ನಿರೀಕ್ಷಕ ಭುಗ್ಗಾರೆಡ್ಡಿ, ಯೋಗಿಶ್, ರಾಜೇಶ್, ಶಂಭುಶೇಖರ್, ಎಲ್ಲ ಮೋಟಾರ್ ವಾಹನ ಚಾಲನಾ ತರಬೇತಿ ಶಾಲೆಗಳ ಪ್ರಾಂಶುಪಾಲರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement