ಇಂದು ಉದ್ಘಾಟನೆ
ಗುಬ್ಬಿಯ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಡಾ. ಗುಬ್ಬಿ ವೀರಣ್ಣ ಟ್ರಸ್ಟ್ ಉದ್ಘಾಟನಾ ಸಮಾರಂಭವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಕಾರ್ಯಕ್ರಮ ಉದ್ಘಾಟಿಸುವರು. ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಸೇರಿದಂತೆ ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು.