ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಿ: ಡಾ. ರಾಮೇಗೌಡ
ಚೇಳೂರು: ಮನುಷ್ಯನಿಗೆ ಕಣ್ಣು ಮುಖ್ಯವಾದ ಅಂಗವಾಗಿದ್ದು ಅದನ್ನು ರಕ್ಷಿಸಿಕೊಳ್ಳಲು ನಿಯಮಿತವಾಗಿ ವೈದ್ಯರ ಸಲಹೆ ಪಡೆಯುವುದು ಸೂಕ್ತ ಎಂದು ಚೇಳೂರು ವೈದ್ಯ ಡಾ. ರಾಮೇಗೌಡ ಹೇಳಿದರು.
ಇಲ್ಲಿನ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ತಾಲೂಕು ಮತ್ತು ಸ್ಥಳೀಯ ವೈದ್ಯಾಧಿಕಾರಿಗಳು, ಚೇಳೂರಿನ ನೇತ್ರಾಧಿಕಾರಿಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕಣ್ಣಿನ ಪೊರೆ ರೋಗ ಉಚಿತ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಚೇಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಿಂಗಳಿಗೊಮ್ಮೆ ಈ ಭಾಗದ ರೈತರ ಕಣ್ಣಿನ ದೋಷವನ್ನು ಪರೀಕ್ಷಿಸಿ ಅಗತ್ಯವಿದ್ದವರಿಗೆ ಶಸ್ತ್ರಚಿಕಿತ್ಸೆಗೆ ದಿನಾಂಕ ನಿಗದಿ ಮಾಡಿ ಬೆಂಗಳೂರಿಗೆ ಕರೆದುಕೊಂಡು ಹೋಗಿ ಡಾ. ಎಂ.ಸಿ ಮೋದಿ ಚಾರಿಟೇಬಲ್ ಕಣ್ಣಿನ ಆಸ್ಪತ್ರೆಯಲ್ಲಿ ಪೊರೆ ತೆಗೆದು ಐಒಎಲ್ ಅಳವಡಿಸಲಾಗುವುದು ಎಂದರು.
ಮೋದಿ ಆಸ್ಪತ್ರೆಯ ವೈದ್ಯರಾದ ಡಾ. ಮುನಿರಾಜು, ಸಹಾಯಕಿ ಶ್ರೀಲಕ್ಷ್ಮೀ, ಚೇಳೂರಿನ ನೇತ್ರಾಧಿಕಾರಿ ಕುಮಾರಸ್ವಾಮಿ, ನವೀನ್ ಇದ್ದರು.