ನಾಳೆ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ
ತುಮಕೂರು: ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಜ.25ರಂದು ಸಂಜೆ 4 ಗಂಟೆಗೆ ತುಮಕೂರಿನ ನೂತನ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿ ಆಯೋಜಿಸಲಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲ ಕಾರ್ಯಕ್ರಮ ಉದ್ಘಾಟಿಸುವರು. ಸಚಿವರಾದ ಟಿ.ಬಿ.ಜಯಚಂದ್ರ, ಡಾ. ಎಚ್.ಸಿ.ಮಹದೇವಪ್ಪ, ಸಂಸದ ಜಿ.ಎಸ್.ಬಸವರಾಜು ಇತರರು ಭಾಗವಹಿಸಲಿದ್ದಾರೆ.
ರಾಮಚಂದ್ರರಾವ್ ಸಿಂಧ್ಯಾ ನಿಧನ
ಗುಬ್ಬಿ: ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಪೊಲೀಸ್ ಉಪ ನಿರೀಕ್ಷಕ ರಾಮಚಂದ್ರರಾವ್ ಸಿಂಧ್ಯಾ(87) ಪಟ್ಟಣದ ತಮ್ಮ ಸ್ವಗೃಹದಲ್ಲಿ ಬುಧವಾರ ನಿಧನರಾದರು. ಜಿಲ್ಲಾ ನಿವೃತ್ತ ಪೊಲೀಸ್ ನೌಕರರ ಸಂಘದ ಕಾರ್ಯದರ್ಶಿ, ತಾಲೂಕು ಕ್ಷತ್ರಿಯ ಮರಾಠ ಪರಿಷತ್ ಅಧ್ಯಕ್ಷ ಹಾಗೂ ತಾಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪತ್ನಿ, ಒಬ್ಬ ಪುತ್ರ ಇದ್ದಾರೆ.