ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ವಚನಗಳ ಆಹ್ವಾನ

Rashmi Kasaragodu
Updated On : 24 Jan 2014, 2:17 am

ತುಮಕೂರು: ಅಖಿಲ ಕರ್ನಾಟಕ ಆಧುನಿಕ ವಚನಕಾರರ ರಾಜ್ಯ ಮಟ್ಟದ ಸಮ್ಮೇಳನದ ಅಂಗವಾಗಿ ರಾಜ್ಯದಿಂದ ವಚನಗಳನ್ನು ಆಹ್ವಾನಿಸಿದ್ದಾರೆ. ಅಖಿಲ ಕರ್ನಾಟಕ ಆಧುನಿಕ ವಚನಗಾರರ ರಾಜ್ಯ ಮಟ್ಟದ ಸಮ್ಮೇಳನ ಮುಂದಿನ ಮಾರ್ಚ್ 7, 8ರಂದು ನಡೆಯಲಿದೆ. ಸಮಾರಂಭದ ಅಂಗವಾಗಿ ಆಧುನಿಕ ವಚನಗಳನ್ನು ಆಸಕ್ತರಿಂದ ಆಹ್ವಾನಿಸಿದ್ದಾರೆ. ಆಸಕ್ತರು ವಚನಗಳನ್ನು ಫೆ.12ನೇ ತಾರೀಖಿನೊಳಗೆ ಕಳುಹಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಸವ ರಮಾನಂದ ಸ್ವಾಮೀಜಿಗಳು ಒನಕಲ್ಲು ಮಹಾಸುಕ್ಷೇತ್ರ ಯಗ್ಗುಂದ, ದಾಬಸ್ ಪೇಟೆ, ನೆಲಮಂಗಲ ತಾಲೂಕು ಸಂಪರ್ಕಿಸಬಹುದು. ದೂ. 9980618488.


ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ

ತುಮಕೂರು: ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ಜ.31ರ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳು ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರ ಆದೇಶದಂತೆ ನಡೆಸಲು ಉದ್ದೇಶಿಸಲಾಗಿದೆ. ಈ ಸಭೆಯಲ್ಲಿ ಬಸ್ ಮಾಲೀಕರು, ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ತಮ್ಮ ಅಹವಾಲನ್ನು ಸಲ್ಲಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕೋರಿದ್ದಾರೆ.


ರೈತರ ಖಾತೆಗೆ ಹಣ ನೇರ ಜಮಾ
ತುಮಕೂರು: ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ ಉಳುಮೆಯಿಂದ ಕೊಯ್ಲಿನವರೆಗೆ ಬೇಕಾಗುವ ವಿವಿಧ ಕೃಷಿ ಯಂತ್ರೋಪಕರಣಗಳಿಗೆ ಮತ್ತು ರಾಷ್ಟ್ರೀಯ ಸೂಕ್ಷ್ಮ ನೀರಾವರಿ ಅಭಿಯಾನ ಯೋಜನೆಯಡಿ ವಿತರಿಸುವ ತುಂತುರು ಮತ್ತು ಹನಿ ನೀರಾವರಿ ಘಟಕಗಳಿಗೆ 5 ಸಾವಿರ ಮತ್ತು ಅದಕ್ಕಿಂತ ಮೇಲ್ಪಟ್ಟು ಒದಗಿಸುವ ಸಹಾಯಧನವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ.  



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments