ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸದ್ಗುಣ ಸಬಲೀಕರಣದಿಂದ ಸದೃಢ ಸಮಾಜ: ವೀರೇಶ ಶ್ರೀ

Rashmi Kasaragodu
Updated On : 24 Jan 2014, 2:19 am

ತುಮಕೂರು: ಸದ್ಗುಣಗಳ ಸಬಲೀಕರಣದಿಂದ ಭವ್ಯ ಸಮಾಜ ನಿರ್ಮಾಣ ಸಾಧ್ಯ ಎಂದು ತುಮಕೂರಿನ ರಾಮಕೃಷ್ಣ-ವಿವೇಕಾನಂದಾಶ್ರಮದ ವೀರೇಶಾನಂದ ಸರಸ್ವತಿ ಸ್ವಾಮಿಗಳು ಪ್ರತಿಪಾದಿಸಿದರು.
ಅವರು ತುಮಕೂರಿನ ಸಪ್ತಗಿರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಇಂದು ವಿದ್ಯಾರ್ಥಿಗಳಲ್ಲಿ ಸದ್ಗುಣಗಳು ಕಣ್ಮರೆಯಾಗುತ್ತಿವೆ.  ಇದರಿಂದ ಸಮಾಜಕ್ಕೆ ಹಾನಿಯಾಗುತ್ತಿದೆ. ಪರಸ್ಪರ ಪ್ರೀತಿ-ವಿಶ್ವಾಸ, ಗೌರವಗಳು ವೃದ್ಧಿಯಾಗುವುದರಿಂದ ನೈತಿಕ ಸಮಾಜದ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಎಂದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಕಾಲೇಜಿನ ಅರ್ಚನಾ ಎಸ್.ಕುಮಾರ್, ಪ್ರಸ್ತುತ ಸಮಾಜದಲ್ಲಿ ಹಣ ಮಾಡುವ ವ್ಯಕ್ತಿಗಳೇ ಆದರ್ಶ ವ್ಯಕ್ತಿಗಳಾಗುತ್ತಿದ್ದು, ಮೌಲ್ಯಗಳಿಗೆ ಬೆಲೆಯಿಲ್ಲದಂತಾಗಿದೆ ಎಂದು ವಿಷಾದಿಸಿದರು. ವಿಶ್ರಾಂತ ಆಂಗ್ಲ ಉಪನ್ಯಾಸಕಿ ವಾಣಿ ದತ್ತಾತ್ರಿ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಡಿ.ಎಸ್.ಕುಮಾರ್ ಉಪಸ್ಥಿತರಿದ್ದರು. ಸಪ್ತಗಿರಿ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನಾರಾಧ್ಯ ಅಧ್ಯಕ್ಷತೆ ವಹಿಸಿದ್ದರು. ಪೂರ್ಣಿಮಾ ಸ್ವಾಗತಿಸಿದರು. ಶ್ವೇತ ಗಿರೀಶ್ ವಂದಿಸಿದರು. ಡಾ. ಪಿ.ಆರ್.ರೇಣುಕಪ್ರಸಾದ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement