v
ಕೊರಟಗೆರೆ: ಲೋಕಸಭಾ ಚುನಾವಣೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಇಲ್ಲವಾದಲ್ಲಿ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಜಿಲ್ಲಾ ಒಕ್ಕಲಿಗ ಜನಜಾಗೃತಿ ವೇದಿಕೆಯ ಅಧ್ಯಕ್ಷ ಹುಲಿಕುಂಟೆ ಮಲ್ಲಿಕಾರ್ಜುನ್ ಮತ್ತು ಗೌರವಾಧ್ಯಕ್ಷ ಮುರಳೀಧರ್ ಹಾಲಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಕಳೆಗುಂದಿದ್ದ ಕಾಂಗ್ರೆಸ್ನ್ನು ಅಧಿಕಾರ ಗದ್ದುಗೆಗೆ ತರುವಲ್ಲಿ ಡಾ. ಜಿ ಪರಮೇಶ್ವರ್ ಕಾರ್ಯವನ್ನು ಪರಿಗಣಿಸಿ ಅವರಿಗೆ ನ್ಯಾಯ ದೊರಕಿಸಿಕೊಡಬೇಕು. ಸರ್ಕಾರದಲ್ಲಿ ಗೌರವಯುತ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ವೇದಿಕೆ ಗೌರವ ಸಲಹೆಗಾರ ಎಲ್.ಲಿಂಗಣ್ಣ, ರಾಜೇಗೌಡ, ಮುಖಂಡರಾದ ವೀರನಾಗಪ್ಪ, ಈರಣ್ಣ, ಲೋಕೇಶ್, ನಾಗರಾಜ್, ದೊಡ್ಡಯ್ಯ, ಪ್ರಕಾಶ್, ರವಿಕುಮಾರ್, ಕೌಶಲ್ ರಾಮ್, ಲಕ್ಷ್ಮೀಕಾಂತ, ಕಾಂತರಾಜ್, ಲಕ್ಷ್ಮೀಶ್ ಇತರರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.