ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಆರ್‌ಟಿಐನಿಂದ ಪಾರದರ್ಶಕ ಆಡಳಿತ: ಗೋವಿಂದರಾಜು

Mainashree
Updated On : 28 Jan 2014, 9:29 am

ತುಮಕೂರು: ಮಾಹಿತಿ ಹಕ್ಕು ಕಾಯ್ದೆ ಆಡಳಿತದಲ್ಲಿ ಪಾರದರ್ಶಕತೆ ಕಾಯ್ದಿಟ್ಟುಕೊಳ್ಳುವ ದೃಷ್ಟಿಯಿಂದ ಜಾರಿಗೆ ಬಂದಿದ್ದು, ಕಾಯ್ದೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಜಿಪಂ ಸಿಇಒ ಗೋವಿಂದರಾಜು ಕರೆ ನೀಡಿದರು.
ಅವರು ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಆಡಳಿತ ತರಬೇತಿ ಸಂಸ್ಥೆ, ಮೈಸೂರು ವತಿಯಿಂದ ಪೊಲೀಸ್, ಕಂದಾಯ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿ ವರ್ಗದವರಿಗೆ ಮಾಹಿತಿ ಹಕ್ಕು-2005 ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಕೆಲಸ ಕಾರ್ಯಗಳ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಸಾಕಷ್ಟು ಜಾಗೃತಿ ಉಂಟುಮಾಡುತ್ತಿದೆ. ಸರ್ಕಾರಿ ಅಧಿಕಾರಿ, ಸಿಬ್ಬಂದಿ ಪಾರದರ್ಶಕತೆಯಿಂದ ಕರ್ತವ್ಯ ನಿರ್ವಹಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ತಿಳಿಸಿದರು.
ಮಾಹಿತಿ ಹಕ್ಕು ಕಾಯ್ದೆಯು ಈ ಹಿಂದಿನಿಂದಲೂ ಜಾರಿಯಲ್ಲಿದ್ದು, 2005ರಲ್ಲಿ ಕಾಯ್ದೆ ರೂಪದಲ್ಲಿ ಹೊರಬಂದಿದೆ. ಕಾಯ್ದೆಯಾಗಿ ರಚನೆಯಾಗುವ ಮೂಲಕ ಆಡಳಿತಕ್ಕೆ ಚುರುಕು ಮುಟ್ಟಿಸಿದೆ. ಸರ್ಕಾರಿ ದಾಖಲೆಗಳು ಮತ್ತು ಕಡತಗಳ ನಿರ್ವಹಣೆ ಸಮರ್ಪಕವಾಗಿ ನಡೆಯುವಂತೆ ಮಾಡಿದೆ ಎಂದು ತಿಳಿಸಿದರು. ಆಡಳಿತ ತರಬೇತಿ ಸಂಸ್ಥೆ, ಮೈಸೂರಿನ ಭೋದಕರಾದ ಕ್ರಿಸ್ಟಿನಾ ಕಾಂತರಾಜ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯ ಎಂ.ಎಚ್.ಲಕ್ಷ್ಮಣ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement