ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

'ಹಳೆ ವಿದ್ಯಾರ್ಥಿಗಳು ಕಲಿವವರಿಗೆ ದಾರಿದೀಪವಾಗಬೇಕು'

Mainashree
Updated On : 28 Jan 2014, 9:30 am

ತುಮಕೂರು: ನಗರದ ಶ್ರೀದೇವಿ ತಾಂತ್ರಿಕ ವಿದ್ಯಾಲಯದಲ್ಲಿ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘ ತನ್ನ ಏಳನೇ ವಾರ್ಷಿಕ ಸಮಾವೇಶವನ್ನು ಆಯೋಜಿಸಿತ್ತು.
ಸಮಾವೇಶದಲ್ಲಿ ರಾಜ್ಯ ಹಾಗೂ ರಾಷ್ಟ್ರದ ವಿವಿಧ ಭಾಗಗಳಿಂದ ಸುಮಾರು 140 ಸಂಘದ ಸದಸ್ಯರು ಪಾಲ್ಗೊಂಡಿದ್ದರು ಎಂದು ಸಮಾವೇಶದ ಆಯೋಜಕ ಪ್ರೊ. ಎಚ್.ಆರ್.ರಂಗನಾಥ ತಿಳಿಸಿದರು.
ಶ್ರೀದೇವಿ ತಾಂತ್ರಿಕ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಚಟುವಟಿಕೆ ಮತ್ತು ಸಂಘದ ಇತರೆ ಅಭಿವೃದ್ಧಿ ವಿಷಯಗಳ ಬಗ್ಗೆ ತಿಳಿಸುತ್ತಾ ಹಳೆ ವಿದ್ಯಾರ್ಥಿಗಳು ಈ ಸಮಾಜಕ್ಕೆ ಏನೆಲ್ಲಾ ಕೊಡುಗೆಗಳನ್ನು ನೀಡಬಹುದು, ಏನೆಲ್ಲಾ ಸಹಾಯ ಮಾಡಬಹುದು ಎಂದು ತಿಳಿಸುತ್ತಾ ಇನ್ನೂ ಹೆಚ್ಚಿನ ಸಹಾಯಸ್ತವನ್ನು ತಮ್ಮ ಸಂಘಕ್ಕೆ ನೀಡಬೇಕೆಂದು ವಿನಂತಿಸಿದರು.
ಮುಖ್ಯ ಅತಿಥಿಯಾಗಿ ಗ್ಲೋಬಲ್ ಇನ್ಸ್‌ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸೈನ್ಸ್ ಬೆಂಗಳೂರಿನ ನಿರ್ದೇಶಕ ಡಾ. ಮಹಾಬಲೇಶ್ವರ ಭಟ್ಟ ಅವರು ದೇಶ ಹಾಗೂ ಅಂತಾರಾಷ್ಟ್ರೀಯ ವಿವಿಗಳಲ್ಲಿ ಹಳೆಯ ವಿದ್ಯಾರ್ಥಿ ಸಂಘ ಏನೆಲ್ಲಾ ಕೊಡುಗೆಗಳನ್ನು ನೀಡಿದೆ ಎಂಬ ಮಾಹಿತಿ ನೀಡಿದರು.
ಪ್ರಾಂಶುಪಾಲ ಡಾ. ಕೆ. ಸುಕುಮಾರನ್ ಮಾತನಾಡಿ, ಇಂತಹ ಸಮಾವೇಶಗಳನ್ನು ಆಯೋಜಿಸುವುದರಿಂದ ಪ್ರಪಂಚದ ವಿವಿಧ ಮೂಲೆಗಳಲ್ಲಿ ಇರುವ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು ಯಶಸ್ಸಿನ ಗುಟ್ಟನ್ನು ಹಂಚಿಕೊಂಡು ತಮ್ಮ ಕಾಲೇಜಿನ ಕಿರಿಯ ವಿದ್ಯಾರ್ಥಿಗಳಿಗೆ ಸಹಾಯವಾಗಬಹುದು ಎಂದರು. ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ಪಿ.ಎಂ.ಚಂದ್ರಶೇಖರಯ್ಯ ಮಾತನಾಡಿ, ಹಳೆ ವಿದ್ಯಾರ್ಥಿಗಳು ತಮ್ಮ ಮಾತೃ ಸಂಸ್ಥೆಗೆ ಮತ್ತು ಅಲ್ಲಿ ವ್ಯಾಸಂಗ ಮಾಡುವ ಈಗಿನ ವಿದ್ಯಾರ್ಥಿಗಳಿಗೆ ಸಹಾಯವಾಗುವುದರ ಮೂಲಕ ಸಮಾಜದ ಒಳಿತಿಗೆ ಪೂರಕವಾಗಬೇಕು ಎಂದು ಸಲಹೆ ನೀಡಿದರು.
ಉಪನ್ಯಾಸಕಿ ಉಷಾಶ್ರೀ ಸ್ವಾಗತಿಸಿದರು. ಉಪನ್ಯಾಸಕ ಸುತನ್ ವಂದಿಸಿದರು. ಉಪನ್ಯಾಸಕಿ ರಶ್ಮಿ ಹಾಗೂ ಸುಷ್ಮಾ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement