ಇಂದು ಹಿತರಕ್ಷಣಾ ಸಮಿತಿ ಸಭೆ
ತಿಪಟೂರು: ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯನ್ನು ಜ.17ರಂದು ಕರೆಯಲಾಗಿತ್ತು. ಆದರೆ ಸಭೆಗೆ ಕೆಲವು ಅಧಿಕಾರಿಗಳು ಮತ್ತು ದಲಿತ ಮುಖಂಡರುಗಳು ಹಾಜರಾಗದ ಕಾರಣ ಸಭೆಯನ್ನು ಜ.30ರ ಬೆ. 11ಗಂಟೆಗೆ ತಾಪಂ ಸಭಾಂಗಣದಲ್ಲಿ ಕರೆಯಲಾಗಿದೆ. ಆದ್ದರಿಂದ ಸಭೆಗೆ ದಲಿತ ಮುಖಂಡರು ಹಾಜರಾಗಿ ತಮ್ಮ ಕುಂದುಕೊರತೆಗಳ ಬಗ್ಗೆ ಮಾಹಿತಿ ನೀಡಬೇಕೆಂದು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ನಾಳೆ ಕಣ್ಣಿನ ಉಚಿತ ತಪಾಸಣೆ
ಶಿರಾ: ಡಾ. ಎಂ.ಸಿ.ಮೋದಿ ಚಾರಿಟೇಬಲ್ ಟ್ರಸ್ಟ್ ಕಣ್ಣಿನ ಆಸ್ಪತ್ರೆ ವತಿಯಿಂದ ತಾಲೂಕಿನ ಕಳ್ಳಂಬೆಳ್ಳ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜ.31ರಂದು ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದ್ದು, ಆಸಕ್ತರು ಶಿಬಿರದ ಪ್ರಯೋಜನ ಪಡೆದುಕೊಳ್ಳಬಹುದು.