ಸಾಮಾಜಿಕ ಪಿಡುಗು ನಿರ್ಮೂಲನೆಗೆ ಶಿಕ್ಷಣ ಅಗತ್ಯ: ನ್ಯಾ. ವಿಜಯಲಕ್ಷ್ಮಿ
ತಿಪಟೂರು: ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಪೋಷಕರದ್ದು ಎಂದು 5ನೇ ಜಿಲ್ಲಾ ಮತ್ತು ಸತ್ರ ನ್ಯಾ. ಎಲ್.ವಿಜಯಲಕ್ಷ್ಮಿ ತಿಳಿಸಿದರು.
ಪಟ್ಟಣದ ಎಪಿಎಂಸಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಕಾನೂನಿನ ಬಗ್ಗೆ ಜನಜಾಗೃತಿ, ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ನಿಷೇದ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಆರ್.ಲೋಕಪ್ಪ ಮಾತನಾಡಿ, ಮಕ್ಕಳು ತಮ್ಮ ಬಾಲ್ಯವನ್ನು ಉತ್ತಮವಾಗಿ ಅನುಭವಿಸುವ ಮೂಲಕ ಉತ್ತಮ ಶಿಕ್ಷಣ ಪಡೆಯಬೇಕು. ಈ ನಿಟ್ಟಿನಲ್ಲಿ ಪೋಷಕರು, ಸ್ತ್ರೀಶಕ್ತಿ ಮಹಿಳೆಯರು, ಅಂಗನವಾಡಿ ಕಾರ್ಯಕರ್ತೆಯರು,ಶಿಕ್ಷಕರು ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ËÚÃÈÚßÑÚ·æÞOÚß’ ಎಂದರು.
ನ್ಯಾ.ಎ.ಎಸ್.ಸೋಮು, ಪ್ರಧಾನ ಸಿವಿಲ್ ನ್ಯಾ. ಕೆ.ಎಸ್. ಶಿಲ್ಪಾ, ಸರ್ಕಾರಿ ಅಭಿಯೋಜಕ ನಿರಂಜನಮೂರ್ತಿ, ವಕೀಲರ ಸಂಘದ ಅಧ್ಯಕ್ಷ ಎಸ್.ಜಯಣ್ಣ, ಕಾನೂನು ಬಗ್ಗೆ ವಿವರಿಸಿದರು. ವಕೀಲರಾದ ರಾಜೇಂದ್ರ ಪ್ರಸಾದ್ ಬಾಲ್ಯ ವಿವಾಹ, ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತು ಹಾಗೂ ಶೋಭಾಜಯದೇವ್ ಮಕ್ಕಳ ಮೇಲೆ ನಡೆಯುತ್ತಿರುವ ದೈಹಿಕ ಹಾಗೂ ಲೈಂಗಿಕ ಹಿಂಸೆಯ ಬಗ್ಗೆ ವಿವರಿಸಿದರು.