ಪೋಷಕರ ಜವಾಬ್ದಾರಿಯೂ ಮುಖ್ಯ
ತುಮಕೂರು: ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಲು ಶಿಕ್ಷಕರು ಮತ್ತು ಪೋಷಕರು ಜವಾಬ್ದಾರಿಯಿಂದ ವಿದ್ಯಾರ್ಥಿಗಳ ಬಗ್ಗೆ ಗಮನಹರಿಸಬೇಕಾಗಿದೆ ಎಂದು ಜಿಪಂ ಅಧ್ಯಕ್ಷ ವೈ.ಎಚ್. ಹುಚ್ಚಯ್ಯ ತಿಳಿಸಿದರು. ಹೆಬ್ಬೂರಿನ ಬಿ.ಆರ್. ಅಂಬೇಡ್ಕರ್ ಗ್ರಾಮೀಣ ಶೈಕ್ಷಣಾಭಿವೃದ್ಧಿ ಜಾಗೃತ ವೇದಿಕೆಯಿಂದ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿಯೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುತ್ತಿರುವುದು ದೇಶದ ಅಭಿವೃದ್ಧಿಗೆ ಸ್ಫೂರ್ತಿ ಎಂದರು. ಜಾಗೃತ ವೇದಿಕೆ ಅಧ್ಯಕ್ಷ ಸಿರಿವರ ಶಿವಮೂರ್ತಿ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳು ನಗರ ವಿದ್ಯಾರ್ಥಿಗಳಂತೆ ಸ್ಪರ್ಧಾತ್ಮಕ ಮನೋಭಾವ ಹೊಂದಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕರಿಸಿದರೆ ಸ್ಫೂರ್ತಿಹೊಂದಿ ಹೆಚ್ಚಿನ ಸಾಧನೆ ಮಾಡಲು ಚೈತನ್ಯ ನೀಡಿದಂತಾಗುತ್ತದೆ ಎಂದರು. ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರ ಸಂಘದ ರಾಜ್ಯಾಧ್ಯಕ್ಷ ನಾಗಭೂಷಣ್, ಗುತ್ತಿಗೆದಾರ ಎನ್.ಸಿ. ಕೃಷ್ಣಕಾಂತ್ ಮಾತನಾಡಿದರು. ಅಧ್ಯಕ್ಷತೆಯನ್ನು ಪ್ರಾಚಾರ್ಯ ಶಂಕರ್ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷ ವೆಂಕಟೇಶಯ್ಯ, ಎಚ್.ಜಿ. ಆನಂದ್ ಕುಮಾರ್ ಇದ್ದರು.