ಬೆಲೆ ಏರಿಕೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ತುಮಕೂರು: ಕೇಂದ್ರದ ಬಿಜೆಪಿ ಸರ್ಕಾರದ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಚುನಾವಣಾ ಸಂದರ್ಭದಲ್ಲಿ ಬಿಜೆಪಿಯವರು ಇನ್ನು 60 ದಿವಸಗಳಲ್ಲಿ ದೇಶದ ಚಿತ್ರಣ ಬದಲಿಸುತ್ತೇವೆ ಎಂಬ ಪೊಳ್ಳು ಭರವಸೆ ನೀಡಿದ್ದರು. ಆದರೆ ಅಧಿಕಾರಕ್ಕೆ ಬಂದ ಕೇವಲ ಒಂದು ತಿಂಗಳಿನಲ್ಲಿ ನಿರಂತರ ಬೆಲೆ ಏರಿಕೆ ಮಾಡುತ್ತಾ ಬಡ ಜನರ ಬೆನ್ನಿಗೆ ಬರೆ ಎಳೆದಿದ್ದೆ ಎಂದು ಆರೋಪಿಸಿದ್ದಾರೆ. ರೈಲ್ವೆ ಸರಕು ದರ ಏರಿಕೆ, ಪೆಟ್ರೋಲ್ ಡೀಸೆಲ್, ಗ್ಯಾಸ್ ಮತ್ತು ನಿತ್ಯದ ಬಳಕೆ ಪದಾರ್ಥಗಳನ್ನು ಏರಿಸುವುದರ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲು ಹೊರಟಿದೆ ಎಂದು ಆರೋಪಿಸಿದೆ. ಪ್ರತಿಭಟನೆಯಲ್ಲಿ ಸಂಸದ ಮುದ್ದಹನುಮೇಗೌಡ, ಶಾಸಕ ರಫೀಕ್ ಅಹಮದ್ ಮುಂತಾದವರು ಇದ್ದರು.