ತುಮಕೂರು

ಉದ್ಯೋಗಕ್ಕೆ ಸಂವಹನ ಕೌಶಲ ಅಗತ್ಯ'

ತುಮಕೂರು: ದೇಶದ ಅಭಿವೃದ್ಧಿ ರೂಪಿಸುವ ಶಕ್ತಿ ನಿಮ್ಮದಾಗಲಿ ಎಂದು ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ವಿಜಯೇಂದ್ರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
  ಇಲ್ಲಿನ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಕಾಂ, ಬಿಎಸ್ಸಿ ಯ ಹೊಸ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿ ಮಾತನಾಡಿದ ಅವರು, ವಿದ್ಯಾರ್ಥಿಗಳಳು ತಮ್ಮ ಕನಸನ್ನು ಸಾಕಾರಗೊಳಿಸುವುದರ ಜೊತೆಗೆ ದೇಶವನ್ನು ಕಟ್ಟುವ ಜವಾಬ್ದಾರಿ ಹೊರುವಂತಾಗಬೇಕು ಎಂದರು.
ಶಿಸ್ತಿನಿಂದ ವರ್ತಿಸಿ: ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಕುಮಾರ್ ಮಾತನಾಡಿ, ಹೊಸ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಶಿಸ್ತಿನಿಂದ ವರ್ತಿಸಬೇಕು. ಮೂರು ವರ್ಷ ಪದವಿ ಪಡೆಯುವಷ್ಟರಲ್ಲಿ ಸ್ವರ್ಧಾತ್ಮಕ ಯುಗಕ್ಕೆ ಬೇಕಾದ ಜ್ಞಾನವನ್ನು ಪಡೆದುಕೊಂಡು ಹೊಸ ಅವಕಾಶಗಳನ್ನು ತಮ್ಮದಾಗಿಸಿಕೊಳ್ಳುವಂತೆ ಕರೆ ನೀಡಿದರು.
ಸಂವಹನ ಕೌಶಲ್ಯ ಅಗತ್ಯ: ಅಧ್ಯಕ್ಷತೆ ವಹಿಸಿದ್ದ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಪ್ರೊ. ಎಸ್.ಎಸ್. ಆರಾಧ್ಯ, ವಿದ್ಯಾರ್ಥಿಗಳು ಇಂದು ಸಂವಹನ ಕೌಶಲ್ಯ ಅರಿತರೆ ಉದ್ಯೋಗ ಗಿಟ್ಟಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ನುಡಿದರು.  ನಾಗರತ್ನ ಪ್ರಾರ್ಥಿಸಿದರು. ಪ್ರೊ. ಶ್ರೀನಿವಾಸ್ ನಿರೂಪಿಸಿದರು. ಪ್ರೊ. ರಾಮಲಿಂಗು ಪರಿಚಯಿಸಿದರು. ಪ್ರೊ. ರಾಮಾನಾಯ್ಕ ವಂದಿಸಿದರು. ಕಾಲೇಜಿನ ಬೋಧಕ, ಬೋಧಕೇತರ ವರ್ಗದವರು ಹಾಜರಿದ್ದರು.    


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್