ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಖಾತೆ ತೆರೆಯಲು ವಿದ್ಯಾರ್ಥಿಗಳಿಗೆ ತೊಂದರೆ

Srinivasa Murthy VN
Updated On : 10 Jul 2014, 1:20 am

ತುಮಕೂರು: ಜನಪರ ಸಂಘಟನೆಗಳ ಒಕ್ಕೂಟದಿಂದ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಬ್ಯಾಂಕ್‌ಗಳಲ್ಲಿ ಉಳಿತಾಯ ಖಾತೆ ತೆರೆಯಲು ಆಗುತ್ತಿರುವ ತೊಂದರೆಯನ್ನು ನಿವಾರಿಸುವಂತೆ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಜಯರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳಿರುವುದು ಒಳ್ಳೆಯದೇ ಸರಿ. ಈ ವಿದ್ಯಾರ್ಥಿ ವೇತನಕ್ಕೆ ಬ್ಯಾಂಕ್ ಉಳಿತಾಯ ಖಾತೆ ಕಡ್ಡಾಯಗೊಳಿಸಲಾಗಿದೆ. ಆದರೆ ಜಿಲ್ಲೆಯಲ್ಲಿ, ನಗರಗಳಲ್ಲಿ ವಿವಿಧ ಬ್ಯಾಂಕುಗಳಲ್ಲಿ ವಿದ್ಯಾರ್ಥಿಗಳ ಉಳಿತಾಯ ಖಾತೆ ತೆರೆಯಲು ನಿರಾಕರಿಸುತ್ತಿದ್ದು, ಆರ್‌ಬಿಐ ನಿರ್ದೇಶನದಂತೆ ವಿದ್ಯಾರ್ಥಿಗಳಿಗೆ ಇಂತಿಷ್ಟೆ ಹಣ ಜಮಾ ಮಾಡಬೇಕು ಎಂದು ನಿರ್ಬಂಧ ವಿಧಿಸಬಾರದು.
  ಆದರೆ, ಸ್ಥಳೀಯ ಬ್ಯಾಂಕುಗಳಲ್ಲಿ ಕನಿಷ್ಠ 500- 1 ಸಾವಿರ ದವರೆಗೆ ಠೇವಣಿ ಪಾವತಿಸಲು ಒತ್ತಾಯಿಸುತ್ತಾರೆ. ಇದರಿಂದ ಕೊಳಗೇರಿಗಳಲ್ಲಿನ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತಿದೆ ಎಂದರು.
ಮನವಿ ಸ್ವೀಕರಿಸಿದ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಜಯರಾಮಯ್ಯ, “OÚàsÚÅæÞ ಇದರ ಬಗ್ಗೆ ಸಭೆ ಕರೆದು ಎಲ್ಲಾ ಬ್ಯಾಂಕುಗಳಲ್ಲಿ ವಿದ್ಯಾರ್ಥಿಗಳಿಗೆ ಕನಿಷ್ಠ ಮೊತ್ತದಲ್ಲಿ ಉಳಿತಾಯ ಖಾತೆ ತೆರೆಯಲು ಹಾಗೂ ಎಲ್ಲಾ ಬ್ಯಾಂಕುಗಳಲ್ಲಿ ಅಪ್ಲಿಕೇಶನ್ ಫಾರ್ಮ್‌ಗಳನ್ನು ನೀಡಲು ವಿಳಂಬ ಮಾಡುವಂತಿಲ್ಲ ಮತ್ತು ಒಂದು ವಾರದೊಳಗೆ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆಗಳನ್ನು ತೆರೆಯಲು ಅಗತ್ಯ OÚÃÈÚß’ ವಹಿಸುವುದಾಗಿ ತಿಳಿಸಿದರು. ಉಳಿತಾಯ ಖಾತೆ ತೆರೆಯಲು ಬ್ಯಾಂಕ್‌ಗಳು ವ್ಯಾಪ್ತಿಯನ್ನು ಗಣನೆಗೆ ತೆಗೆದುಕೊಳ್ಳದೆ ವಿದ್ಯಾರ್ಥಿಗಳಿಗೆ ಬ್ಯಾಂಕ್ ಖಾತೆ ತೆರಯಲು ಅನುವು ಮಾಡಿಕೊಡಬೇಕು. ಖಾತೆ ತೆರೆಯಲು ಬ್ಯಾಂಕ್‌ಗಳು ನಿರಾಕರಿಸಿದರೆ ವಿದ್ಯಾರ್ಥಿಗಳು ಮತ್ತು ಪೋಷಕರು ಲೀಡ್ ಬ್ಯಾಂಕ್‌ನ ಮುಖ್ಯ ವ್ಯವಸ್ಥಪಾಕರನ್ನು ಸಂರ್ಕಿಸಬಹುದು ಎಂದು ಹೇಳಿದರು.
 ಎಸ್‌ಬಿಎಂ ಎಜಿಎಂ ನಾಗೇಶ್ ಸಮ್ಮುಖದಲ್ಲಿ ಸಮಾಲೋಚನೆ ನಡೆಸಲಾಯಿತು. ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ಕೊಳಗೇರಿ ಸಮಿತಿಯ ಸೈಯದ್ ಅಲ್ತಾಪ್, ನಗರ ವಂಚಿತ ಯುವಜನ ಸಂಪನ್ಮೂಲ ಕೇಂದ್ರದ ಶೆಟ್ಟಾಳಯ್ಯ, ಸಮಾನ ಮಕ್ಕಳ ಮಂಟಪದ ಕೋಮಲ, ಅರುಣಣ್ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement