ವಿದ್ಯಾರ್ಥಿಗಳಿಗೆ ಸಂದರ್ಶನ 14ಕ್ಕೆ
ತುಮಕೂರು: ಸ್ಥಳೀಯ ಸರ್ಕಾರಿ ಪಾಲಿಟೆಕ್ನಿಕ್ ವತಿಯಿಂದ ಐಟಿಐ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ದ್ವಿತೀಯ ವರ್ಷ, ತೃತೀಯ ಸೆಮಿಸ್ಟರ್ ಡಿಪ್ಲೋಮೋ ಕೋರ್ಸ್ಗೆ ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ಕಲ್ಪಿಸಲು ಜು.14ರಂದು ಬೆಳಿಗ್ಗೆ 9 ಗಂಟೆಗೆ ಸಂದರ್ಶನ ಏರ್ಪಡಿಸಲಾಗಿದೆ. ಈಗಾಗಲೇ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿ ಮೆರಿಟ್ ಪಟ್ಟಿಯಲ್ಲಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳು ಈ ಸಂದರ್ಶನಕ್ಕೆ ಹಾಜರಾಗತಕ್ಕದ್ದು. ವಿದ್ಯಾರ್ಥಿಗಳು ತಮ್ಮ ಎಲ್ಲಾ ಮೂಲದಾಖಲಾತಿಗಳನ್ನು ಸಂದರ್ಶನದ ಸಮಯದಲ್ಲಿ ಹಾಜರುಪಡಿಸಬೇಕು. ಯಾವುದೇ ಮೂಲ ದಾಖಲಾತಿಗಳನ್ನು ಒದಗಿಸದಿದ್ದಲ್ಲಿ ಪ್ರವೇಶಕ್ಕೆ ಅವಕಾಶವಿಲ್ಲ. ಪ್ರವೇಶ ದೊರೆತ ವಿದ್ಯಾರ್ಥಿಗಳು ನಿಗದಿತ ಶುಲ್ಕ ಪಾವತಿಸಿ ಪ್ರವೇಶ ಪಡೆಯಬೇಕೆಂದು ಪಾಲಿಟೆಕ್ನಿಕ್ ಪ್ರಾಂಶುಪಾಲರು ತಿಳಿಸಿದ್ದಾರೆ.