ಸಂಚಾರಿ ಜನತಾ ನ್ಯಾಯಾಲಯ ಕಾರ್ಯಕ್ರಮ
ಪಾವಗಡ: ಅಧಿಕಾರಿಗಳು ಸರ್ಕಾರದ ಆಸ್ತಿಯ ಕಾವಲುಗಾರರು. ಕೆಲವರ ಅಸಡ್ಡೆಯಿಂದ ಗ್ರಾಮೀಣ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಪಟ್ಟಣದ ಜೆಎಂಎಫ್ ನ್ಯಾಯಾಲಯದ ನ್ಯಾ. ವರದರಾಜ್ ಅಭಿಪ್ರಾಯಪಟ್ಟರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ತುಮಕೂರು, ತಾಲೂಕು ಕಾನೂನು ಸೇವಾ ಸಮಿತಿ ಪಾವಗಡ ತಾ, ವಕೀಲರ ಸಂಘ ತಾಲೂಕು ಆಡಳಿತ, ತಾಪಂ, ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ತಾಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯದ ಕಾರ್ಯಕ್ರಮದದಲ್ಲಿ ಅವರು ಮಾತನಾಡಿದರು. ಸಿವಿಲ್ ನ್ಯಾಯಾಧೀಶ ಕಸನಪ್ಪನಾಯ್ಕ್ ಮಾತನಾಡಿ, ಕಾನೂನು ಜ್ಞಾನ ಪ್ರತಿಯೊಬ್ಬರು ಅರಿಯಬೇಕು ಎಂದರು. ತಹಸೀಲ್ದಾರ್ ತಿಮ್ಮಬೋವಿ ವಿಷಯ ಮಂಡಿಸಿದರು. ತಾಪಂ ಇಒ ತಿಪ್ಪೇಸ್ವಾಮಿ, ಮಂಜುನಾಥ್, ಭಗವಂತಪ್ಪ, ಪಿ.ಶಿವಕುಮಾರ್ ಸೇರಿ ಅನೇಕರಿದ್ದರು.