ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ರೈತರಿಗೆ ಬೀಜ, ಗೊಬ್ಬರ ಪೂರೈಸಿ: ಪ್ರಕಾಶ್

Srinivasa Murthy VN
Updated On : 15 Jul 2014, 1:05 am

ಕೊರಟಗೆರೆ: ಕೊರಟಗೆರೆ ತಾಲೂಕಿನಲ್ಲಿ ಮುಂಗಾರು ಚುರುಕುಗೊಂಡಿದ್ದು ಕೃಷಿ ಅಧಿಕಾರಿಗಳು ರೈತರಿಗೆ ಸಮರ್ಪಕ ಉತ್ತಮ ಬೀಜ ಮತ್ತು ರಸಗೊಬ್ಬರ ಕೊರತೆಯಾಗದಂತೆ ಎಚ್ಚರ ವಹಿಸಬೇಕಾಗಿದೆ ಎಂದು ತಾಪಂ ಪ್ರಭಾರ ಅಧ್ಯಕ್ಷ ಎಲ್.ವಿ. ಪ್ರಕಾಶ್ ತಿಳಿಸಿದರು.
ಕೊರಟಗೆರೆ ಪಟ್ಟಣದ ತಾಪಂ ಸಭಾಂಗಣದಲ್ಲಿ ಆಯೋಜಿಸಿದ್ದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ ಮಾಸಿಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷಿ ಅಧಿಕಾರಿಗಳ ಮಾಹಿತಿ ಪ್ರಕಾರ ತಾಲೂಕಿನಲ್ಲಿ ಜೂನ್ ಅಂತ್ಯದವರೆಗೆ ವಾಡಿಕೆ 161.ಮಿ.ಮೀ ಮಳೆ ಪೈಕಿ ಇದುವರೆಗೆ 252.1 ಮಿ.ಮೀ ಮಳೆಯಾಗಿದೆ. ತಾಲೂಕಿನಲ್ಲಿ ಈಗಾಗಲೇ ಕೃಷಿ ಚಟುವಟಿಕೆ ಪ್ರಾರಂಭವಾದ ಹಿನ್ನೆಲೆಯಲ್ಲಿ ರೈತರಿಗೆ ಕೊರತೆಯಾಗದಂತೆ ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ವಿತರಿಸುವಂತೆ ಸೂಚಿಸಿದರು.
ಇದರೊಂದಿಗೆ ಶೈಕ್ಷಣಿಕ ವರ್ಷದಲ್ಲಿ ಎಲ್ಲ ಶಾಲೆಗಳಲ್ಲೂ ದಾಖಲಾತಿ ಪ್ರಾರಂಭವಾಗಿದ್ದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತಿರುವ ವಿದ್ಯಾರ್ಥಿ ನಿಲಯಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಂಡು ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತಮ ವಾತಾವರಣದೊಂದಿಗೆ ಸ್ವಚ್ಛ ಪರಿಸರ ಹಾಗೂ ಪೌಷ್ಟಿಕ ಆಹಾರ ಒದಗಿಸುವಂತೆ ಸಮಾಜ ಕಲ್ಯಾಣಾಧಿಕಾರಿ ಮಮತಾ ಅವರಿಗೆ ಸೂಚಿಸಿದರು.
ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿನ ಬವಣೆ ನೀಗಿಸಲು ಕುಸಿದಿರುವ ಅಂತರ್ಜಲ ವೃದ್ಧಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಇದರೊಂದಿಗೆ ಆರೋಗ್ಯ ಇಲಾಖೆ ಜನತೆಯ ಆರೋಗ್ಯದ ಬಗ್ಗೆ ಎಚ್ಚರ ವಹಿಸುವಂತೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸೌಕರ್ಯ ಕಲ್ಪಿಸುವಂತೆ ಅಧಿಕಾರಿಗಳು ಗಮನ ಹರಿಸುವಂತೆ ಸೂಚಿಸಿದರು. ಅರಣ್ಯ, ತೋಟಗರಿಕೆ, ಜಲಾನಯನ, ಪಶು, ಮೀನುಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಿ ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಕೃಷಿ ಸಹಾಯಕ ನಿರ್ದೇಶಕ ಹನುಮಂತರಾಯಪ್ಪ ಮಾಹಿತಿ ನೀಡಿ, ತಾಲೂಕಿನಲ್ಲಿ 2014-15ನೇ ಸಾಲಿನಲ್ಲಿ 6150 ಹೆಕ್ಟೇರ್ ನೀರಾವರಿ, 17490 ಹೆಕ್ಟೇರ್‌ನಲ್ಲಿ ಬಿತ್ತನೆ ಪ್ರಗತಿಯಲ್ಲಿದೆ. ರೌತರಿಗೆ ಮುಸುಕಿನ ಜೋಳ, ಶೇಂಗಾ, ರಾಗಿ, ಬತ್ತ, ತೊಗರಿ ಬಿತ್ತನೆ ಬೀಜಗಳು ಇಲಾಖೆಯ ಮೂಲಕ ವಿತರಣೆ ಕಾರ್ಯ ಪ್ರಗತಿಯಲ್ಲಿದೆ ಎಂದರು.   
ಪ್ರಭಾರ ಕಾರ್ಯನಿರ್ವಹಣಾಧಿಕಾರಿ, ಅಕ್ಷರ ದಾಸೊಹ ನಿರ್ದೇಶಕ ಎಲ್.ಕಾಮಯ್ಯ, ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಶೇಖರ್, ತಾಲೂಕು ವೈದ್ಯಾಧಿಕಾರಿ ಡಾ.ಮೋಹನ್ ದಾಸ್, ಬೆಸ್ಕಾಂ ಎಇಇ ನಾಗರಾಜು, ಸಿಡಿಪಿಒ ವಿಶ್ವನಾಥ್, ಕ್ಷೇತ್ರ ಸಂಪನ್ಮೂಲಾಧಿಕಾರಿ ಶ್ರೀನಿವಾಸ ರೆಡ್ಡಿ, ಸಮಾಜ ಕಲ್ಯಾಣಾಧಿಕಾರಿ ಮಮತಾ, ಮೀನುಗಾರಿಕಾ ಅಧಿಕಾರಿ ರಾಘವೇಂದ್ರ, ತಾಪಂ ಸಹಾಯಕ ಅಧಿಕಾರಿ ರಮೇಶ್, ಜೆಇ ಶಾಂತಕುಮಾರ್ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement