ತುಮಕೂರು

ಗಾಂಧಿ ಕನಸು ಸಾಕಾರಗೊಳಿಸಿ

ತುಮಕೂರು: ಸಹಕಾರಿ ಕ್ಷೇತ್ರವು ಮಹಾತ್ಮ ಗಾಂಧಿ ಅವರ ಪ್ರಮುಖ ಕನಸುಗಳಲ್ಲಿ ಒಂದಾಗಿದ್ದು, ಪ್ರತಿಯೊಬ್ಬರೂ ತಮ್ಮ ನಿತ್ಯ ಜೀವನದಲ್ಲಿ ಸ್ವಾವಲಂಬಿ ಬದುಕು ಸಾಧಿಸಲು ಈ ಕ್ಷೇತ್ರವು ಸಹಕಾರಿ ಎಂದು ದೆಹಲಿಯ ಎನ್‌ಎಎಫ್‌ಸಿಯುಬಿ ನಿರ್ದೇಶಕ ಹಾಗೂ ತುಮಕೂರು ಮರ್ಚೆಂಟ್ಸ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಅಧ್ಯಕ್ಷ ಎನ್.ಎಸ್. ಜಯಕುಮಾರ್ ಅಭಿಪ್ರಾಯಪಟ್ಟರು.
ನಗರದ ಸೇಕ್ರೆಡ್ ಹಾರ್ಟ್ ಸಮುದಾಯ ಭವನದಲ್ಲಿ ಶನಿವಾರ ನಡೆದ ವಿಠ್ಠಲ್ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ದಶಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಸಹಕಾರಿ ಕ್ಷೇತ್ರವು ದೊಡ್ಡಮಟ್ಟದಲ್ಲಿ ಬೆಳೆಯುತ್ತಿದೆ. ಪ್ರಪಂಚದ ಎಲ್ಲ ರಾಷ್ಟ್ರಗಳು ಸಹಕಾರಿ ಕ್ಷೇತ್ರಗಳಲ್ಲಿ ಉತ್ತಮ ಪ್ರಗತಿ ಸಾಧಿಸುತ್ತಿವೆ. ಸಮಾಜದ ಸಣ್ಣಪುಟ್ಟ ವ್ಯಾಪಾರಿಗಳಿಗೆ ಉದ್ಯೋಗ ಸಾಲವನ್ನು ನೀಡುವ ಮೂಲಕ ಸಾಮಾನ್ಯ ವರ್ಗದ ಜನರಿಗೆ ಸಹಕಾರಿಯಾಗುತ್ತಿದೆ ಎಂದರು.
ದೇಶದಲ್ಲಿ ಗುಜರಾತ್ ಸಹಕಾರಿ ಕ್ಷೇತ್ರದಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರ ಹಾಗೂ ಕರ್ನಾಟಕ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನವನ್ನು ಅಲಂಕರಿಸಿದೆ. ನಮ್ಮಲ್ಲಿನ ಬಹುತೇಕ ರಾಜ್ಯ ಹಾಗೂ ದೇಶಗಳಲ್ಲಿ ರಾಷ್ಟ್ರೀಯ ಬ್ಯಾಂಕ್‌ಗಳು ಸಹಕಾರಿ ಸಂಸ್ಥೆಗಳ ಎದುರು ಏನನ್ನೂ ಮಾಡದಂತಹ ಸ್ಥಿತಿಯಲ್ಲಿದೆ. ಹಾಗಾಗಿ ಅತಿ ವೇಗವಾಗಿ ಬೆಳೆಯುತ್ತಿರುವ ಸಹಕಾರಿ ಸಂಘಗಳ ಮೇಲೆ ಹಿಡಿತ ಸಾಧಿಸಲು ಕೆಲವು ಬ್ಯೂರೋಕ್ರೆಸಿಗಳು ಇಲ್ಲಸಲ್ಲದ ಷಡ್ಯಂತ್ರ ರೂಪಿಸುತ್ತಿವೆ. ಈ ನಡುವೆಯೇ ಸಹಕಾರಿ ಸಂಘಗಳು ಹೊಸ ತಂತ್ರಜ್ಞಾನ ಹಾಗೂ ಯುವ ಪೀಳಿಗೆಯನ್ನು ಬಳಸಿಕೊಂಡು ಆರ್ಥಿಕ ಪ್ರಗತಿ ಸಾಧಿಸಬೇಕಿದೆ ಎಂದರು.
ದೇಶದ ಶೇ.47ರಷ್ಟು ಜನತೆ ಇಂದಿಗೂ ಬ್ಯಾಂಕಿಂಗ್ ಕ್ಷೇತ್ರವನ್ನು ಪ್ರವೇಶಿಸದಿರುವುದು ಬೇಸದ ಸಂಗತಿ. ನಗರದ ವಿಠ್ಠಲ್ ಸೌಹಾರ್ದ ಪತ್ತಿನ ಸಹಕಾರಿಯು ಹತ್ತು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ. ಅಂತೆಯೇ ಮುಂದಿನ ದಿನಗಳಲ್ಲಿಯೂ ಸಹಕಾರಿ ಸಂಸ್ಥೆಯನ್ನು ಯಾವುದೇ ವೈಯುಕ್ತಿಕ ಹಿತಾಸಕ್ತಿ, ಸ್ವಾರ್ಥಕ್ಕೆ ಸಂಸ್ಥೆಯನ್ನು ಬಳಸಿಕೊಳ್ಳದಂತೆ ಸಲಹೆ ನೀಡಿದರು.
ಸುಮಾರು 15 ಕೋಟಿಗಳಷ್ಟು ಸ್ವಂತ ಬಂಡವಾಳವನ್ನು ಹೊಂದಿರುವ ಈ ಸೌಹಾರ್ದ ಸಹಕಾರಿಯೂ ಶೇ.100ರಷ್ಟು ಹಣ ವಸೂಲಾತಿಯಲ್ಲಿ ಅಗ್ರ ಸ್ಥಾನದಲ್ಲಿದೆ ಎಂದು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಗುರುನಾಥ್ ಜ್ಯಾಂತಿಕರ ಮೆಚ್ಚುಗೆ ವ್ಯಕ್ತಪಡಿಸಿದರು.
ವಿಠ್ಠಲ್ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಅಧ್ಯಕ್ಷ ಎನ್.ಎನ್. ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಸಹಕಾರಿಯಲ್ಲಿ ದುಡಿದ ಹಿರಿಯರಾದ ಟಿ.ಆರ್. ನಾರಾಯಣರಾವ್, ಪಿ.ಎಲ್. ನಾರಾಯಣರಾವ್, ಕೆ.ಶಿವನಂಜಪ್ಪ, ಜಗದೀಶ್, ದೇವರಾಜು, ಬಿ.ಎಸ್. ರಮೇಶ್ ಅವರನ್ನು ಸನ್ಮಾನಿಸಲಾಯಿತು. ಸೌಹಾರ್ದ ಸಹಕಾರಿಯ ನಿರ್ದೇಶಕರಾದ ಗಂಗಾಧರಯ್ಯ, ಸಹಕಾರಿ ನಿಯಮಿತದ ನಿರ್ದೇಶಕರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್