ಶಾಲೆ ಬಿಟ್ಟ ಮಕ್ಕಳ ವಿಶೇಷ ದಾಖಲಾತಿ ಆಂದೋಲನ
ಕೊರಟಗೆರೆ: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮತ್ತೆ ಸೇರಿಸುವ ವಿಶೇಷ ದಾಖಲಾತಿ ಆಂದೋಲನ ಜು. 31ವರೆಗೂ ನಡೆಸುವುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಎಸ್. ಮಹೇಶ್ ತಿಳಿಸಿದರು.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕೊರಟಗೆರೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸುವ ವಿಶೇಷ ದಾಖಲಾತಿಯನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದೆ. ಇದು ಜು. 31ರವರೆಗೆ ನಡೆಯಲಿದೆ.
ತಾಲೂಕಿನ ಅರ್ಹ 6ರಿಂದ 14 ವರ್ಷದೊಳಗಿನ ಮಕ್ಕಳನ್ನು ಶಾಲಾ ವ್ಯಾಪ್ತಿಗೆ ತರುವ ಹಾಗೂ ಶಿಕ್ಷಣದಿಂದ ಯಾರೂ ವಂಚಿತರಾಗಬಾರದೆಂಬ ಉದ್ದೇಶದಿಂದ ಈ ಆಂದೋಲನ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಸಾರ್ವಜನಿಕರು, ಪೋಷಕರು, ಎಸ್ಡಿಎಂಸಿ, ಗ್ರಾಪಂ, ತಾಪಂ, ಜಿ.ಪಂ. ಸದಸ್ಯರು, ಸರ್ಕಾರೇತರ ಸಂಘ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಭಾಗಿದಾರ ಇಲಾಖೆಗಳು ಶಿಕ್ಷಣ ಇಲಾಖೆಯೊಂದಿಗೆ ಸಹಕರಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳು ಗಮನಕ್ಕೆ ಬಂದಲ್ಲಿ ಹತ್ತಿರದ ಸರ್ಕಾರಿ, ಅನುದಾನಿತ ಶಾಲೆಗಳ ಮುಖ್ಯಶಿಕ್ಷಕರು, ಸಿಆರ್ಪಿ, ಬಿಆರ್ಪಿ, ಇಸಿಒ, ಬಿಆರ್ಸಿ, ಬಿಇಒ ಗಮನಕ್ಕೆ ತರಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಐ.ಎಸ್. ಮಹೇಶ್ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಟಿ. ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.ಋ ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಎಸ್. ಮಹೇಶ್, ಕ್ಷೇತ್ರ ಸಮನ್ವಯಾಧಿಕಾರಿ ಟಿ.ಶ್ರೀನಿವಾಸರೆಡ್ಡಿ (9480695364), ಓಓಎಸ್ಸಿ ನೋಡಲ್ ಅಧಿಕಾರಿ ಜಿ.ಡಿ. ಶ್ರೀರಂಗಯ್ಯ(9538280126) ಅವರನ್ನು ಸಂಪರ್ಕಿಸಲು ಕೋರಲಾಗಿದೆ.