ತುಮಕೂರು

ತಾಂತ್ರಿಕತೆ ಸದ್ಬಳಕೆಯಾಗಲಿ

ತುಮಕೂರು: ಮೊಬೈಲ್, ಇಂಟರ್‌ನೆಟ್ ಬಳಕೆ ಮನುಷ್ಯನ ಉಪಯೋಗಕ್ಕಾಗಿಯೇ ಬಂದಿದ್ದು, ಇವುಗಳ ದುರುಪಯೋಗ ಸಲ್ಲದು ಎಂದು ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಸಿದ್ಧಲಿಂಗಪ್ರಭು ಹೇಳಿದರು.
ವರದಕ್ಷಿಣೆ ವಿರೋಧಿ ವೇದಿಕೆ, ಸಾಂತ್ವನ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ನಗರದ ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಅಭಿಯಾನದ ಜಾಗೃತಿ ಸಪ್ತಾಹದ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳು ಇದನ್ನು ಉಪಯೋಗಿಸಲೇಬಾರದು ಎಂದೇನಿಲ್ಲ. ಆದರೆ ಇದರ ಉಪಯೋಗದಿಂದ ಬೇರೆ ತೊಂದರೆಗಳು ಎದುರಾಗುತ್ತವೆ ಎನ್ನುವ ಸದುದ್ದೇಶ ಇದರ ಹಿಂದಿದೆ. ಹಾಗಾಗಿ ಯಾವುದೇ ವಸ್ತುಗಳನ್ನು ಬಳಕೆ ಮಾಡುವಾಗ ಜಾಗ್ರತೆ ಇದ್ದರೆ ಒಳಿತು ಎಂದರು.
18 ವರ್ಷದ ಆಜುಬಾಜಿನ ಮಕ್ಕಳಿಗೆ ತಾವು ಮಾಡುವ ಕೆಲಸಗಳ ಬಗ್ಗೆ ಸರಿಯಾದ ಅರಿವು ಇರುವುದಿಲ್ಲ. ಈ ಅರಿವನ್ನು ಉಂಟು ಮಾಡಬೇಕು. ಪ್ರತಿ ಮನೆಯಲ್ಲಿಯೂ ಉತ್ತಮ ವಾತಾವರಣ ಇರಬೇಕು. ಇಂದ್ರಿಯಗಳ ನಿಗ್ರಹ ಇರಬೇಕು. ಯಾವುದು ಬೇಕು, ಬೇಡ ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳುವ ಶಕ್ತಿ ಬರಬೇಕು. ಸಕಾರಾತ್ಮಕ ಯೋಚನೆಗಳನ್ನು ಮನಸ್ಸಿನಲ್ಲಿ ಮೂಡಿಸಿಕೊಂಡು ಸೃಜನಶೀಲತೆಯತ್ತ ಮುಂದಾಗಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಡಾ. ರಫೀಕ್ ಅಹಮದ್ ಮಾತನಾಡಿ, ಶತಮಾನಗಳಿಂದಲೂ ಹೆಣ್ಣಿನ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ದೌರ್ಜನ್ಯದಲ್ಲಿ ಭಾರತ ಮೂರನೇ ಸ್ಥಾನ ಪಡೆದುಕೊಂಡಿರುವುದು ಕಳವಳಕಾರಿಯಾದ ಸಂಗತಿಯಾಗಿದೆ ಎಂದರು.
ಜಿಪಂ ಅಧ್ಯಕ್ಷ ವೈ.ಎಚ್. ಹುಚ್ಚಯ್ಯ ಮಾತನಾಡಿ, ಉತ್ತಮ ಸಂಸ್ಕೃತಿ ಹೊಂದಿದ್ದ ಭಾರತದಂತಹ ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಹಿಡಿತ ತಪ್ಪುತ್ತಿದೆ. ಯೋಗ್ಯವಲ್ಲದ ಜನರಿಂದ ಇಡೀ ಸಮಾಜ ಹಾಳಾಗುತ್ತಿದೆ. ಮನಸ್ಸಿನ ನಿಯಂತ್ರಣ ಹಾಗೂ ಸಂಸ್ಕಾರಯುತ ಜೀವನದಿಂದ ಉತ್ತಮ ಮಾರ್ಗ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದರು.
ಚರಕ ಆಸ್ಪತ್ರೆಯ ವೈದ್ಯ ಡಾ. ಬಸವರಾಜು ಉಪನ್ಯಾಸ ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ದೊಡ್ಡಹಾಲಪ್ಪ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಎಸ್. ನಟರಾಜು ಮಾತನಾಡಿದರು. ವರದಕ್ಷಿಣೆ ವಿರೋಧಿ ವೇದಿಕೆ ಅಧ್ಯಕ್ಷೆ ಅನ್ನಪೂರ್ಣ ವೆಂಕಟನಂಜಪ್ಪ, ಸಾಪ್ತಾಹಿಕ ವರದಿ ವಾಚಿಸಿದರು. ಎಂಪ್ರೆಸ್ ಕಾಲೇಜು ಪ್ರಾಂಶುಪಾಲ ಬಿ. ಮರುಳಯ್ಯ ಸ್ವಾಗತಿಸಿದರು. ವೇದಿಕೆಯ ಪ್ರಧಾನ ಕಾರ್ಯದರ್ಶಿ ಸಾ.ಚಿ. ರಾಜಕುಮಾರ್ ಸೇರಿದಂತೆ ವೇದಿಕೆಯ ಮುಖಂಡರು, ಸಾಂತ್ವನ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!