ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ವಿಧಾನಸೌಧ ಮುತ್ತಿಗೆ: ನೀರೆಯರ ನೇರ ಎಚ್ಚರಿಕೆ

Srinivasa Murthy VN
Updated On : 3 Jun 2014, 12:07 pm

ತಿಪಟೂರು: ಅಂತರ್ಜಲದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪರಿಣಾಮ ಜನ-ಜಾನುವಾರುಗಳಿಗೆ ಮತ್ತು ಕೃಷಿಗೆ ತೀವ್ರ ತೊಂದರೆಯಾಗಿ ಜೀವನ ನಿರ್ವಹಿಸಲು ತುಂಬಾ ಕಷ್ಟವಾಗುತ್ತಿದೆ. ಆದ್ದರಿಂದ ಸರ್ಕಾರ ಯಗಚಿ ಹಿನ್ನೀರಿನ ಯೋಜನೆಯನ್ನು ಕೂಡಲೇ ಜಾರಿಗೆ ತರಬೇಕೆಂದು ಬನ್ನಿಹಳ್ಳಿ ಗ್ರಾಮದ ರೈತ ಮಹಿಳೆಯರು ಸರ್ಕಾರವನ್ನು ಆಗ್ರಹಿಸಿದರು.
 ತಾಲೂಕಿನ ಬನ್ನಿಹಳ್ಳಿಯಲ್ಲಿ ರೈತ ಸಂಘದ ಪದಾಧಿಕಾರಿಗಳು ಯಗಚಿ ನೀರಾವರಿ ಅನುಷ್ಠಾನ ಸಂಬಂಧ ಮುಂದಿನ ಹೋರಾಟದ ಬಗ್ಗೆ ಸಭೆ ನಡೆಸಿದ ರೈತ ಮಹಿಳೆಯರು ಮಾತನಾಡಿ, ಸರ್ಕಾರ ಕೇವಲ ಭರವಸೆಗಳನ್ನು ನೀಡುತ್ತಾ ರೈತರ ಯಾವೊಂದು ಸಮಸ್ಯೆಗಳನ್ನು ಶಾಶ್ವತವಾಗಿ ಬಗೆಹರಿಸುತ್ತಿಲ್ಲ. ಯಗಚಿ ನೀರಾವರಿಯ ಬಗ್ಗೆ ಹಲವಾರು ಬಾರಿ ರಾಜ್ಯ ಸರ್ಕಾರದ ಗಮನಕ್ಕೆ ತಂದರೂ ಯೋಜನೆಯನ್ನು ಕೈಗೆತ್ತಿಕೊಳ್ಳುವ ಬದಲಾಗಿ ಮುಖ್ಯಮಂತ್ರಿಗಳು ಯೋಜನೆ ಬಗ್ಗೆ ಸರ್ಕಾರಕ್ಕೆ ಆಸಕ್ತಿ ಇಲ್ಲ ಎಂದಿದ್ದಾರೆ. ಸರ್ಕಾರ ಯೋಜನೆಯ ಬಗ್ಗೆ ಗಮನಹರಿಸದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರೈತ ಮಹಿಳೆಯರು ಸಿದ್ಧರಿದ್ದೇವೆ ಎಂದು ರೈತ ಸರ್ಕಾರದ ವಿರುದ್ಧ ಹರಿಹಾಯ್ದರಲ್ಲದೆ ಆಕ್ರೋಶ ವ್ಯಕ್ತಪಡಿಸಿದರು.  
 ತಾಲೂಕು ಅಧ್ಯಕ್ಷ ಯೋಗೀಶ್ವರ ಸ್ವಾಮಿ ಮಾತನಾಡಿ ಈ ಯೋಜನೆಯ ಬಗ್ಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಿದ ನಂತರ ಹೋರಾಟ ಪ್ರಕ್ರಿಯೆಗಳನ್ನು ಸಿದ್ಧಪಡಿಸಲಾಗುವುದು. ಅರಸೀಕೆರೆ ಹಾಗೂ ಬೇಲೂರು ತಾಲೂಕಿನ ಹಳ್ಳಿಗಳಲ್ಲಿ ಪ್ರತಿ ನಿತ್ಯ ರೈತ ಸಂಘ ಮತ್ತು ನೀರಾವರಿ ಹೋರಾಟ ಸಮಿತಿಯ ಪದಾಧಿಕಾರಿಗಳ ಸಭೆ ನಡೆಸುತ್ತಿರುವುದಾಗಿ ತಿಳಿಸಿದರು. ಸಮಗ್ರ ನೀರಾವರಿ ಹೋರಾಟ ಸಮಿತಿಯ ಸಂಚಾಲಕ ಬಸವರಾಜು, ನಂಜುಂಡಪ್ಪ, ಷಡಕ್ಷರಿ, ನಾಗೇಶ್, ರೇಖಾ, ನಾಗರಾಜು ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement