ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಮರ ಬೆಳೆಸಿದರೆ ಮಾತ್ರ ಪರಿಸರ ಉಳಿಯಲು ಸಾಧ್ಯ

Rashmi Kasaragodu
Updated On : 6 Jun 2014, 1:52 am

ಶಿರಾ: ತಂದೆ ತಾಯಿ ತಮ್ಮ ಮಗುವನ್ನು ಆರೈಕೆ ಮಾಡಿ ಬೆಳೆಸುವ ರೀತಿಯಲ್ಲಿ ಮರಗಳನ್ನು ಬೆಳೆಸಿದರೆ  
ಮಾತ್ರ ಪರಿಸರ ಉಳಿಯಲು ಸಾಧ್ಯ ಇಲ್ಲವಾದಲ್ಲಿ ಪರಿಸರ ನಾಶವಾಗುತ್ತದೆ ಎಂದು ನಗರಸಭೆ ಸದಸ್ಯ ಪ್ರಕಾಶ್ ಮುದ್ದುರಾಜ್ ತಿಳಿಸಿದರು.
ಅವರು ವಿಶ್ವಪರಿಸರ ದಿನಾಚರಣೆ ಅಂಗವಾಗಿ ನಗರದ ನಾಯಕರಹಟ್ಟಿ ಅಂಗನವಾಡಿ ಶಾಲೆಯ ಹತ್ತಿರ ಸಸಿಯನ್ನು ನೆಟ್ಟು ಮಾತನಾಡುತ್ತಿದ್ದರು. ಮನುಷ್ಯ ತನ್ನ ದುರಾಸೆ ತ್ಯಜಿಸಿ, ಕ್ಷಣಿಕ ಸುಖದ ಆಸೆಗೆ ತಿಲಾಂಜಲಿ ಬಿಟ್ಟು,
ತಾನು ಬದುಕುವ ನೆಲ-ಜಲಕ್ಕೆ ಗೌರ ನೀಡಿದಲ್ಲಿ ಮಾತ್ರ ಮುಂದಿನ ಜನಾಂಗಕ್ಕೂ ಬದುಕಲು ಎಡೆಯಾಗಬಹುದು.
 ಇಲ್ಲವಾದಲ್ಲಿ ನೈಸರ್ಗಿಕ ಸಂಪನ್ಮೂಲಗಳು ಬರಿದಾಗಿ ಭೂಮಿ ಬರಡಾಗಿ, ಉಸಿರಾಡುವ ಗಾಳಿಗೆ, ಕುಡಿಯುವ ನೀರಿಗೆ ಮತ್ತು ತಿನ್ನುವ ತುತ್ತು ಅನ್ನಕ್ಕೂ ತತ್ವಾರ ಬರುವ ದಿನಗಳು ದೂರವಿಲ್ಲ ಎಂದರು.
ನಗರಸಬೆ ಸದಸ್ಯ ಮೌನೇಶ್ ಮಾತನಾಡಿ, ಕೈಗಾರೀಕರಣ ಹೆಸರಲ್ಲಿ ಅಭಿವೃದ್ಧಿಯ ನೆಪದಲ್ಲಿ ಮರಗಿಡಗಳನ್ನು ಕಡಿದು, ನೆಲ ಹೊಲ, ಜಲಗಳನ್ನು ಕಲುಷಿತಗೊಳಿಸಿ ಸಸ್ಯರಾಶಿಯನ್ನು ಬಲಿತೆಗೆದು ಕಾಡು ಕಡಿದು ಕಾಂಕ್ರೀಟ್ ನಾಡು ಮಾಡಲು ಮನುಷ್ಯ ಹೊರಟ್ಟಿದ್ದಾನೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement