ಅಪಘಾತದಲ್ಲಿ ವ್ಯಕ್ತಿ ಸಾವು
ಹೆಬ್ಬೂರು: ಮಿನಿ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ಬಿಸಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಕ್ತಿಯಾರ ಪಾಷ(42) ಸಾವನ್ನಪ್ಪಿದ ದುರ್ದೈವಿ. ದ್ವಿಚಕ್ರ ವಾಹನದ ಹಿಂಬದಿ ಕುಳಿತಿದ್ದ ಕೃಷಿ ಅಧಿಕಾರಿ ಮಂಜೇಗೌಡ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ತುಮಕೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆ.ಜಿ. ಟೆಂಪಲ್ ಕಡೆಯಿಂದ ದನಗಳನ್ನು ತುಂಬಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.