ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಪರೀಕ್ಷೆ 16ರಿಂದ ಎಸ್ಸೆಸ್ಸೆಲ್ಸಿ ಪೂರಕ

Srinivasa Murthy VN
Updated On : 13 Jun 2014, 11:28 am

200 ಮೀ. ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿಗಳು ಮುಚ್ಚಿ
ತುಮಕೂರು: ತುಮಕೂರು ಜಿಲ್ಲೆಯಾದ್ಯಂತ ಎಸ್ಸೆಸೆಲ್ಸಿ ಪೂರಕ ಪರೀಕ್ಷೆಗಳು ಜೂನ್ 16 ರಿಂದ ಜೂ.23 ರವರೆಗೆ ನಡೆಯಲಿದ್ದು, ಪರೀಕ್ಷೆಯಲ್ಲಿ ನಕಲು ತಡೆಗಟ್ಟಲು ಸಕಲ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು(ದ) ಜಿಲ್ಲೆ ಉಪನಿರ್ದೇಶಕರು ತಿಳಿಸಿದ್ದಾರೆ.
ಪರೀಕ್ಷೆಯಲ್ಲಿ ನಕಲು ಮಾಡುವವರ ವಿರುದ್ಧ ಎಸ್ಸೆಸೆಲ್ಸಿ ಪರೀಕ್ಷಾ ಮಂಡಳಿ ಸುತ್ತೋಲೆಯಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆಯಾ ತಾಲೂಕಿನ ತಹಸೀಲ್ದಾರರು ಹಾಗೂ ನೋಡಲ್ ಅಧಿಕಾರಿಗಳು ಪರೀಕ್ಷೆ ನಡೆಯುವ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ನಕಲು ಮಾಡುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್, ಬ್ಲೂಟೂಥ್, ಮತ್ತು ನಿಷಿದ್ಧ ಇತರೆ ಉಪಕರಣಗಳನ್ನು ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಅಲ್ಲದೆ ಪರೀಕ್ಷಾ  ಕೇಂದ್ರಗಳಿಂದ 200 ಮೀಟರ್ ಅಂತರದಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷೆ ನಡೆಯುವ ಅವಧಿಯಲ್ಲಿ  ಕಡ್ಡಾಯವಾಗಿ ಮುಚ್ಚಲು  ಕ್ರಮ ಕೈಗೊಳ್ಳಲು ತಹಸೀಲ್ದಾರರಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಶಿಕ್ಷಕರ ವರ್ಗಾವಣೆ-ತಪಾಸಣೆಗೆ ಹಾಜರಾಗಲು ಸೂಚನೆ
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ 2013-14ನೇ ಸಾಲಿಗೆ ಸಂಬಂಧಿಸಿದಂತೆ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ, ಜಿಲ್ಲೆಯ ವೈದ್ಯಕೀಯ ಮಂಡಳಿಯಿಂದ ವೈದ್ಯಕೀಯ ಪ್ರಮಾಣ ಪತ್ರ ಪಡೆದ ಶಿಕ್ಷಕರು, ವಿಭಾಗಮಟ್ಟದ ತ್ರಿಸದಸ್ಯ ಸಮಿತಿ ಮುಂದೆ ತಪಾಸಣೆಗೆ ಹಾಜರಾಗಬೇಕಾಗುತ್ತದೆ ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲೆ ಉಪನಿರ್ದೇಶಕರು ತಿಳಿಸಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಘಟಕದೊಳಗೆ ವರ್ಗಾವಣೆ ಪಡೆಯುವ ಶಿಕ್ಷಕರು ಜೂನ್ 23 ರಿಂದ 26 ರವರೆಗೆ ಮತ್ತು ಘಟಕದ ಹೊರಗೆ (ಅಂತರ್ ಘಟಕ) ವರ್ಗಾವಣೆ ಪಡೆಯುವ ಶಿಕ್ಷಕರು ಜೂನ್ 28 ರಿಂದ ಜುಲೈ 2 ರೊಳಗಾಗಿ ತಪಾಸಣೆಗೆ ಹಾಜರಾಗಬೇಕು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement