ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕಾಂಗ್ರೆಸ್‌ಪರ ಮತಯಾಚನೆ

Mainashree
Updated On : 19 Jun 2014, 10:39 am

ತುಮಕೂರು:  ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಸಭಾ ಚುನಾವಣಾ ಹಿನ್ನೆಲೆ ತುಮಕೂರು ನಗರದ ಶೆಟ್ಟಿಹಳ್ಳಿ ಮುಖ್ಯರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಷಫಿ ಅಹಮದ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಮತಯಾಚನಾ ಸಭೆ ನಡೆಸಲಾಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಎಚ್. ನಿಂಗಪ್ಪ, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಎಚ್. ಮುರಿಗೇಂದ್ರಪ್ಪ ಅವರು ಗೆಲ್ಲುವ ಲಕ್ಷಣಗಳು ಹೆಚ್ಚಾಗಿವೆ. ಈಗಾಗಲೇ ಅಭ್ಯರ್ಥಿಯ ಪರವಾಗಿ ಜಿಲ್ಲೆಯ ಸುಮಾರು ಇಪ್ಪತ್ತೆಂಟು ಸಾವಿರ ಪದವೀಧರ ಮತದಾರರನ್ನು ಮುಕ್ತವಾಗಿ ಭೇಟಿ ಮಾಡಿ ಮತಯಾಚನೆ ಮಾಡಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಒಬ್ಬ ಸಜ್ಜನ, ನಿಷ್ಠಾವಂತ ಮೇಲಾಗಿ ಶಿಕ್ಷಕರ ಕ್ಷೇತ್ರದಿಂದ ಬಂದವರು. ಈಗಾಗಲೇ ಸಾವಿರಾರು ಶಿಕ್ಷಕರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನ್ಯಾಯಾಲಯದಲ್ಲಿ ಹೋರಾಟ ಮಾಡಿದವರು. ಇಂತಹ ವ್ಯಕ್ತಿ ಎಂಎಲ್‌ಸಿ ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವುದರಿಂದ ಮುಂದಿನ ದಿನಗಳಲ್ಲಿ ಶಿಕ್ಷಕರ, ಪದವೀಧರರ ಸಮಸ್ಯೆಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಮುರಿಗೇಂದ್ರಪ್ಪ ಅವರು ಕೊಂಡಿಯಾಗಲಿದ್ದಾರೆ. ಹೀಗಾಗಿ ಕಾಂಗ್ರೆಸ್ಪ್‌ಕ್ಷದ ಅಭ್ಯರ್ಥಿ ಸಿ.ಹೆಚ್. ಮುರಿಗೇಂದ್ರಪ್ಪ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಅವರನ್ನು ಜಯಶೀಲರನ್ನಾಗಿ ಮಾಡುವಂತೆ ಮನವಿ ಮಾಡಿದರು.  ಕಾಂಗ್ರೆಸ್ ಜಿಲ್ಲಾಧ್ಯಕ್ಷ ಷಫೀ ಅಹಮದ್ ಅವರು ಮಾತನಾಡಿ, ಈಗಾಗಲೇ ಒಂದು ವ್ಯವಸ್ಥಿತವಾದ ಪ್ರಚಾರವನ್ನು ಪಕ್ಷದ ವತಿಯಿಂದ ಮಾಡಲಾಗಿದೆ. ಮುರಿಗೇಂದ್ರಪ್ಪ ಅವರು ಖಂಡಿತವಾಗಿಯೂ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement