ಕನ್ನಡ ಡಿಂಡಿಮ ಸಾಂಸ್ಕೃತಿಕ ಕಾರ್ಯಕ್ರಮ ಇಂದು
ಶಿರಾ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಕನ್ನಡ ಡಿಂಡಿಮ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಾ. 2 ಭಾನುವಾರ ಸಂಜೆ 6 ಗಂಟೆಗೆ ನಗರದ ಶ್ರೀ ನಾರಾಯಣ ಸ್ವಾಮಿ ಬಯಲು ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಅಧ್ಯಕ್ಷ ವೈ. ನರೇಶ್ಬಾಬು ತಿಳಿಸಿದ್ದಾರೆ. ಕಾರ್ಯಕ್ರಮ ಅಧ್ಯಕ್ಷತೆಯನ್ನು ಪತ್ರಕರ್ತ ಎಸ್.ನಾಗಣ್ಣ ವಹಿಸಲಿದ್ದು, ಸಚಿವ ಟಿ.ಬಿ.ಜಯಚಂದ್ರ ಅವರು ಉದ್ಘಾಟಿಸುವರು.
ನಾಳೆ ಸನ್ಮಾನ ಕಾರ್ಯಕ್ರಮ
ಶಿರಾ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತರ ಮತ್ತು ಸಹಾಯಕಿಯರ ಫೆಡರೇಷನ್ ವತಿಯಿಂದ ಮಾ. 3 ಸೋಮವಾರದಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಅತ್ಯುತ್ತಮ ಕೆಲಸ ನಿರ್ವಹಿಸಿರುವ ಎಲ್ಲಾ ವೃತ್ತದ ಒಬ್ಬೊಬ್ಬ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಅಧ್ಯಕ್ಷೆ ಎಚ್.ಕೆ.ರಾಜಮ್ಮ ಅವರು ತಿಳಿಸಿದ್ದಾರೆ.
ಕೋಳಿ ಸಾಕಾಣಿಕೆ ತರಬೇತಿ
ತುಮಕೂರು: ಪಶುಪಾಲನಾ ಮತ್ತು ಪಶು ವೈದ್ಯಸೇವಾ ಇಲಾಖೆ ಪರೀಕ್ಷಕರ ತರಬೇತಿ ಕೇಂದ್ರದ ವತಿಯಿಂದ ಉಚಿತ ಕೋಳಿ ಸಾಕಾಣಿಕೆ ತರಬೇತಿ ಮಾ. 4 ಹಾಗೂ 5 ರಂದು ಹಮ್ಮಿಕೊಳ್ಳಲಾಗಿದೆ. ಎಲ್ಲ ವಯೋವಾನದ ಆಸಕ್ತ ಸಾರ್ವಜನಿಕರು, ರೈತರು ಈ ತರಬೇತಿ ಪ್ರಯೋಜನವನ್ನು ಪಡೆದುಕೊಳ್ಳೂಬಹುದಾಗಿದೆ. ಈ ತರಬೇತಿ ಅವಧಿಯಲ್ಲಿ ಯಾವುದೇ ಭತ್ಯೆ ನೀಡಲಾಗುವುದಿಲ್ಲ. ಆಸಕ್ತರು, ಸಹಾಯಕ ನಿರ್ದೇಶಕರ ಕಚೇರಿ, ಪಶು ವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರ, ಕುಣಿಗಲ್ ರಸ್ತೆ. ಇಲ್ಲಿಗೆ ಮಾ. 4 ರದು ಬೆಳಗ್ಗೆ 10-30 ಕ್ಕೆ ಹಾಜರಾಗುವಂತೆ ಕೋರಲಾಗಿದೆ. ಮಾಹಿತಿಗಾಗಿ 0816-2251214 ಸಂಪರ್ಕಿಸುವಂತೆ ಕೋರಲಾಗಿದೆ.
ಇಂದು ಛಲವಾದಿ ಸಮಾವೇಶ
ತುಮಕೂರು: ಮಾ. 2 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಛಲವಾದಿ ರಾಜ್ಯ ಮಟ್ಟದ ಸಮಾವೇಶವನ್ನು ಏರ್ಪಡಿಸಲಾಗಿದೆ. ರೈಲ್ವೆ ಸಚಿವ ಎಂ. ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಛಲವಾದಿ ರಾಜ್ಯಾಧ್ಯಕ್ಷ ಕೆ. ಶಿವರಾಂ, ಕಂದಾಯ ಸಚಿವ ಶ್ರೀನಿವಾಸಪ್ರಸಾದ್, ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಸೇರಿದಂತೆ ಇತರರು ಪಾಲ್ಗೊಳ್ಳಲ್ಲಿದ್ದಾರೆ ಎಂದು ಛಲವಾದಿ ಜಿಲ್ಲಾಧ್ಯಕ್ಷ ಟಿ.ಆರ್. ನಾಗೇಶ್ ಕೋರಿದ್ದಾರೆ.