ಗ್ರಾಪಂ ಉಪ ಚುನಾವಣೆ: ಮದ್ಯ ನಿಷೇಧ
ತುಮಕೂರು: ಜಿಲ್ಲೆಯ ಗುಬ್ಬಿ, ಕುಣಿಗಲ್, ತಿಪಟೂರು, ಮಧುಗಿರಿ ಮತ್ತು ಪಾವಗಡ ತಾಲೂಕುಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮಪಂಚಾಯತಿಗಳ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡಂತೆ ಸದರಿ ಕ್ಷೇತ್ರಗಳಲ್ಲಿ ಮದ್ಯ ವಹಿವಾಟು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಙ ಮಾರ್ಚ್ 2 ರ ಸಂಜೆ 6 ಗಂಟೆಯ ವರೆಗೆ ಮತದಾನ ನಡೆಯುವ ಕ್ಷೇತ್ರದ 5 ಕಿ.ಮೀ. ವ್ಯಾಪ್ತಿಯಲ್ಲಿ ಹಾಗೂ ಮಾರ್ಚ್ 5 ರಂದು ಮತ ಎಣಿಕೆ ನಡೆಯುವ ತಾಲೂಕು ಕೇಂದ್ರದಿಂದ 5 ಕಿ.ಮೀ. ವ್ಯಾಪ್ತಿಯಲ್ಲಿ, ಮಾರ್ಚ್ 5 ರ ಬೆ.6 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುವಂತೆ ಎಲ್ಲಾ ಮದ್ಯ ವಹಿವಾಟುಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಆದೇಶಿಸಿದ್ದಾರೆ.