ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ನಾಳೆ ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

Rashmi Kasaragodu
Updated On : 2 Mar 2014, 1:19 am

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 3 ರ ಸೋಮವಾರ ತುಮಕೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸುವರು.   ಅಂದು ಬೆಳಿಗ್ಗೆ 11.30 ಗಂಟೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಿ.ಜಿ.ಎಸ್. ವಲ್ಡ್ ಸ್ಕೂಲ್ ಆವರಣದ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ಹೊರಡುವ ಮುಖ್ಯಮಂತ್ರಿಗಳು, 11.50ಕ್ಕೆ ತುಮಕೂರು ಜಿಲ್ಲೆಯ ಮಧುಗಿರಿ  ತಾಲೂಕಿನ ಮಧುಗಿರಿಯಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‌ನಲ್ಲಿ ಬಂದಿಳಿಯುವರು.   ನಂತರ ಮಧ್ಯಾಹ್ನ 12 ಗಂಟೆಗೆ ಮಧುಗಿರಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮುಖ್ಯಮಂತ್ರಿಗಳು ನಂತರ ಮಧ್ಯಾಹ್ನ 3 ಗಂಟೆಗೆ ಮಧುಗಿರಿ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ನಿರ್ಗಮಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement