ಮಲ್ಲಾಘಟ್ಟದ ಗಂಗಾಧರೇಶ್ವರ ಸ್ವಾಮಿ ದನಗಳ ಜಾತ್ರೆ
ತುರುವೇಕೆರೆ: ತಾಲೂಕಿನ ಇತಿಹಾಸ ಪ್ರಸಿದ್ಧ ಮಲ್ಲಾಘಟ್ಟದ ಶ್ರೀ ಗಂಗಾಧರೇಶ್ವರ ಸ್ವಾಮಿಯವರ 43 ನೇ ವರ್ಷದ ದನಗಳ ಜಾತ್ರಾ ಮಹೋತ್ಸವ ಮಾ.5 ರವರೆಗೆ ನಡೆಯಲಿದೆ ಎಂದು ಜಾತ್ರಾ ಸಮಿತಿಯ ಅಧ್ಯಕ್ಷ ತಾಲೂಕು ಪಂಚಾಯ್ತಿ ಅಧ್ಯಕ್ಷ ಕೆ.ಎಂ.ಗಂಗಾಧರ್ ತಿಳಿಸಿದ್ದಾರೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಹೊಂದಿರುವ ಅಮಾನಿಕೆರೆ ಮಲ್ಲಾಘಟ್ಟ ಕ್ಷೇತ್ರದಲ್ಲಿ 27 ರಿಂದ ಮಾರ್ಚ್ 5 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಜಾತ್ರಾ ವೇಳೆ ದನಗಳಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಔಷಧೋಪಚಾರಗಳು ದೊರೆಯಲಿವೆ. ಇದೇ ವೇಳೆ ವ್ಯವಸಾಯ, ಮೀನುಗಾರಿಕೆ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಕೋಳಾಲ ಗಂಗಾಧರ್ ತಿಳಿಸಿದ್ದಾರೆ. 4 ರಂದು ಧಾರ್ಮಿಕ ಸಮಾರಂಭ ನಡೆಯಲಿದೆ. ಸಮಾರಂಭ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ವಹಿಸುವರು.