ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

6 ಗ್ರಾಮಗಳಲ್ಲಿ ರು. 75 ಲಕ್ಷ ವೆಚ್ಚದಲ್ಲಿ ಚರಂಡಿ, ಕಾಂಕ್ರೀಟ್ ರಸ್ತೆ ನಿರ್ಮಾಣ

Srinivasa Murthy VN
Updated On : 5 Mar 2014, 12:33 pm

ಗುಬ್ಬಿ: ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಹೆಚ್ಚುವರಿಯಾಗಿ ಬಿಡುಗಡೆಯಾಗಿರುವ ಅನುದಾನದಡಿ ಗುಬ್ಬಿ ವಿಧಾನಸಭಾ ಕ್ಷೇತ್ರದ 6 ಗ್ರಾಮಗಳಲ್ಲಿ 75 ಲಕ್ಷ ರು. ವೆಚ್ಚದಲ್ಲಿ ಚರಂಡಿ ಹಾಗೂ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು. ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಮೂಲಭೂತ ಸೌಲಭ್ಯ ಕಲ್ಪಿಸಲು ವಿವಿಧ ಯೋಜನೆಯಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಿರುವುದಾಗಿ ತಿಳಿಸಿದರು. ಜಿ.ಹೊಸಹಳ್ಳಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 20 ಲಕ್ಷ ರು. ವೆಚ್ಚದಲ್ಲಿ ಚರಂಡಿ ಮತ್ತು ಕಾಂಕ್ರಿಟ್‌ರಸ್ತೆ ನಿರ್ಮಾಣ, ಜಿ.ಹರಿವೇಸಂದ್ರ ಪರಿಶಿಷ್ಟ ಜಾತಿ ಕಾಲೋನಿಗೆ 10 ಲಕ್ಷ ರು. ಕರೇಕುರಿಹಟ್ಟಿ ಪರಿಶಿಷ್ಟ ಜಾತಿ ಕಾಲೋನಿಗೆ 10 ಲಕ್ಷರು, ಹಾಗಲವಾಡಿ ಹೊಸ ಕಾಲೋನಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಗೆ 10 ಲಕ್ಷ ರು. ಮಾದಲಾಪುರ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಗೆ 10 ಲಕ್ಷ ರು. ಬೈಚೇನಹಳ್ಳಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಗೆ 15 ಲಕ್ಷ ರು. ವೆಚ್ಚದಲ್ಲಿ ಸುಸಜ್ಜಿತವಾದ ಚರಂಡಿ ಮತ್ತು ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದರು. ಕಾಮಗಾರಿಗಳ ಗುಣಮಟ್ಟ ಕಾಪಾಡುವ ಮೂಲಕ ಉತ್ತಮ ಗುಣಮಟ್ಟದ ರಸ್ತೆ ಹಾಗೂ ಚರಂಡಿಗಳನ್ನು ನಿರ್ಮಿಸಲು ಗುತ್ತಿಗೆದಾರರು ಗಮನಹರಿಸಬೇಕೆಂದರು.
 ಗ್ರಾಮೀಣ ಜನರ ಅಗತ್ಯ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಗ್ರಾಮೀಣ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗಿದ್ದು, ವಿವಿಧ ಯೋಜನೆಗಳಡಿ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಲ್ಲಾ ಕಾಮಗಾರಿಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದೆಂದು ತಿಳಿಸಿದ ಅವರು ಯಾವುದೇ ಗ್ರಾಮದಲ್ಲೂ ಮೂಲಭೂತ ಸಮಸ್ಯೆಗಳು ಉಂಟಾಗದಂತೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಅಮ್ಮನಘಟ್ಟ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಎ.ಆರ್.ಯತೀಶ್, ಸದಸ್ಯ ದೇವರಾಜು, ಕರಿಯಣ್ಣ, ನಾಗರಾಜ ಅರಸ್, ಜಯಮ್ಮ, ಸರೋಜಮ್ಮ, ಮುಖಂಡ ಹೊದಲೂರು ವಿಜಯಕುಮಾರ್, ಸಿದ್ದರಾಜು, ಎಇಇ.ತಿಮ್ಮೇಗೌಡ ಮುಂತಾದವರು ಭಾಗವಹಿಸಿದ್ದರು.

ಅಕ್ರಮವಾಗಿ ಸಾಗಿಸುತ್ತಿದ್ದ ಹಸು, ಎಮ್ಮೆ ವಶ
ಶಿರಾ
: ತಾಲೂಕಿನ ಕಳ್ಳಂಬೆಳ್ಳ ಟೋಲ್‌ಗೇಟ್ ಬಳಿ ಹೆದ್ದಾರಿಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ ಎಮ್ಮೆ, ಮತ್ತು ದನಗಳನ್ನು ಪತ್ತೆಮಾಡಿ ಸಾಗಾಣಿಕೆ ಮಾಡುತ್ತಿದ್ದವರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಚಿತ್ರದುರ್ಗ ಕಡೆಯಿಂದ ಲಾರಿಯಲ್ಲಿ ಎಮ್ಮೆ ಮತ್ತು ದನಗಳನ್ನು ಒಂದರ ಪಕ್ಕ ಒಂದರಂತೆ ಕ್ರೂರವಾಗಿ ತುಂಬಿ ಹತ್ಯೆ ಮಾಡುವ ಸಲುವಾಗಿ ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ.
ಬೆಂಗಳೂರಿನ ಅನಿಮಲ್ ವೆಲ್‌ಫೇರ್ ಆಫಿಸರ್ ಜೋಶೈನ್ ಅಂಟೋನಿ ಎಂಬುವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಲಾರಿಯನ್ನು ಅಡ್ಡಗಟ್ಟಿ ದನಗಳನ್ನು ರಕ್ಷಿಸಿದ್ದಾರೆ. ಈ ಬಗ್ಗೆ ಕಳ್ಳಂಬೆಳ್ಳ ಠಾಣೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement