ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಕೆಜೆಪಿಗೂ ಯಡಿಯೂರಪ್ಪಗೂ ಸಂಬಂಧವಿಲ್ಲ: ಪ್ರಸನ್ನಕುಮಾರ್

Vishwanath S
Updated On : 7 Mar 2014, 12:24 pm

ತುಮಕೂರು: ಕೆಜೆಪಿಗೂ, ಯಡಿಯೂರಪ್ಪನವರಿಗೂ ಇನ್ನು ಮುಂದೆ ಯಾವುದೇ ಸಂಬಂಧವಿಲ್ಲವೆಂದು ಕೆಜೆಪಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಪದ್ಮನಾಭ ಪ್ರಸನ್ನ ಕುಮಾರ್ ತಿಳಿಸಿದರು.
ಅವರು ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೆಜೆಪಿ ಯನ್ನು ಬಿಜೆಪಿ ಪಕ್ಷದ ಜೊತೆಗೆ ವಿಲೀನ ಮಾಡಬೇಕೆಂಬ ಅವರ ಆಸೆ ಎಂದಿಗೂ ನೆರವೇರುವುದಿಲ್ಲ. ಏಕೆಂದರೆ ವಿಲೀನ ಪ್ರಕ್ರಿಯೆ ತುಂಬಾ ಜಟಿಲವಾದ ಕಾರ್ಯಕ್ರಮವಾದ್ದರಿಂದ ಎಲ್ಲವೂ ಸುಸೂತ್ರವಾಗಿ ನಡೆಯಬೇಕು. ಅಲ್ಲದೇ ಕೆಜೆಪಿ ಸಂಸ್ಥಾಪಕರ ಅನುಮತಿ ಕಡ್‌ಡಾಯವಾಗಬೇಕು ಎಂದರು.
ಈಗಾಗಲೇ ಯಡಿಯೂರಪ್ಪನವರು ಕೆಜೆಪಿಯನ್ನು ಬಿಜೆಪಿಯಲ್ಲಿ ವಿಲೀನ ಮಾಡಿದ್ದೇನೆಂದು ಸುಳ್ಳು ಹೇಳಿ ವಿಲೀನಕ್ಕಾಗಿ ಸುಳ್ಳು ಸೂತ್ರವನ್ನು ವಿಧಾನಸಭಾಧ್ಯಕ್ಷರಿಗೆ ಕೊಟ್ಟು ಕೆಜೆಪಿಯು ಬಿಜೆಪಿಯಲ್ಲಿ ವಿಲೀನವಾಗಿದೆ ಎಂದು ಸಭಾದ್ಯಕ್ಷರ ಬಾಯಿಂದ ಸುಳ್ಳು ಹೇಳಿಸಿದ್ದಾರೆ ಎಂದು ಹೇಳಿದರು.
28 ಕ್ಷೇತ್ರಗಳಲ್ಲೂ ಸ್ಪರ್ಧೆ: ಕೆಜೆಪಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲೂ ಸ್ಪರ್ಧಿಸುವುದಾಗಿ ತಿಳಿಸಿದರು. ಈಗಾಗಲೇ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ಹಾವೇರಿ ಸೇರಿದಂತೆ ಒಟ್ಟು 13 ಕ್ಷೇತ್ರಗಳ ಸಂಭಾವ್ಯ ಪಟ್ಟಿ ಸಿದ್ಧವಾಗಿದೆ ಎಂದರು. ಉಳಿದ ಎಲ್ಲಾ ಜಿಲ್ಲೆಗಳ ಪ್ರವಾಸ ಮುಗಿಸಿದ ಬಳಿಕ ಮಾರ್ಚ್ 16 ರಂದು ಪಟ್ಟಿ ಬಿಡುಗಡೆಗೊಳಿಸಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement