ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಪಿಯುಸಿ ಪರೀಕ್ಷೆಗೆ ಸಿದ್ಧತೆ

Vishwanath S
Updated On : 8 Mar 2014, 1:04 am

ತುಮಕೂರು: ಜಿಲ್ಲೆಯಲ್ಲಿ ಮಾರ್ಚ್ 12 ರಿಂದ 27 ರವರೆಗೆ ಒಟ್ಟು 39 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಯಾವುದೇ ಅಹಿತಕರ ಘಟನೆಗಳು ಮತ್ತು ನಕಲು ಮಾಡುವ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದರಾಜು ಅವರು ತಿಳಿಸಿದರು.
ಪ್ರಸ್ತುತ ಸಾಲಿನಲ್ಲಿ ಹೊಸದಾಗಿ 22124 ವಿದ್ಯಾರ್ಥಿಗಳು, 3561 ಪುನರಾವರ್ತಿತ ವಿದ್ಯಾರ್ಥಿಗಳು, 939 ಖಾಸಗಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟಾರೆ 26624 ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗೆ ಹಾಜರಾಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯೊಳಗೆ ನಿಷೇಧಾಜ್ಞೆ ಜಾರಿಗೊಳಿಸಲು ಜಿಲ್ಲಾಧಿಕಾರಿಗಳನ್ನು ಕೋರಲಾಗುವುದು ಎಂದು ಹೇಳಿದರು.ಪರೀಕ್ಷೆಯಲ್ಲಿ ನಕಲು ಮಾಡುವುದನ್ನು ಸಂಪೂರ್ಣವಾಗಿ ತಡೆಗಟ್ಟಲು ಕ್ರಮ ತೆಗೆದುಕೊಳ್ಳಲು ಸೂಚಿಸಿದ ಅವರು ತಹಶೀಲ್ದಾರ್ ಹಾಗೂ ನೋಡಲ್ ಅಧಿಕಾರಿಗಳು ಪರೀಕ್ಷೆ ನಡೆಯುವ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ನಕಲು ಮಾಡುವುದನ್ನು ತಡೆಗಟ್ಟುವಂತೆ ಸೂಚಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್, ಬ್ಲೂಟೂತ್ ಮತ್ತು ಇತರೆ ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆ ನಿಷೇಧಿಸುವಂತೆ ತಿಳಿಸಿದರು.
ಜಿಲ್ಲೆಯಾದ್ಯಂತ ಒಟ್ಟು 39 ಪರೀಕ್ಷಾ ಕೇಂದ್ರಗಳಿದ್ದು, ಈ ಪೈಕಿ 3 ಪರೀಕ್ಷಾ ಕೇಂದ್ರ ಅತಿ ಸೂಕ್ಷ್ಮ ಹಾಗೂ 3 ಪರೀಕ್ಷಾ ಕೇಂದ್ರಗಳು ಸೂಕ್ಷ್ಮ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲ್ಪಟ್ಟಿದ್ದು, ಸದರಿ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸುವಂತೆ ಪೋಲಿಸ್ ಅಧೀಕ್ಷಕರಿಗೆ ತಿಳಿಸಿದರು.
ಪರೀಕ್ಷಾ ಸಿದ್ದತೆ ಬಗ್ಗೆ ಹಾಗೂ ಅವ್ಯವಹಾರ ತಡೆಗಟ್ಟಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಮತ್ತು ಕಂದಾಯ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ ಎಂದು ನುಡಿದರು.
ಸಹಾಯಕ ನಿರ್ದೇಶಕರು ತಾಲೂಕು ರೇಷ್ಮೆ ಇಲಾಖೆ, ತುಮಕೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತುಮಕೂರು ತಾಲೂಕು ಇವರನ್ನು ತುಮಕೂರು ತಾಲೂಕಿನ ನೋಡೆಲ್ ಅಧಿಕಾರಿಯನ್ನಾಗಿ, ತಿಪಟೂರು ತಾಲೂಕಿನ ನೋಡಲ್ ಅಧಿಕಾರಿಯಾಗಿ ಸಹಕಾರಿ ಸಂಘಗಳ ಸಹಾಯಕ ನಿಬಂಧಕರು, ತಿಪಟೂರು ಉಪವಿಭಾಗ ಇವರನ್ನು ನೇಮಿಸಲಾಗಿದೆ. ಮಧುಗಿರಿ ತಾಲೂಕಿಗೆ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಗುಬ್ಬಿ ತಾಲೂಕಿಗೆ ಸಿ.ಡಿ.ಪಿ.ಓ. ಗುಬ್ಬಿ, ಕುಣಿಗಲ್ ತಾಲೂಕಿಗೆ ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಕುಣಿಗಲ್, ತುರುವೆಕೆರೆ ತಾಲೂಕಿಗೆ ಕ್ಷೇತ್ರ ಶಿಕ್ಷಣಾಧಿಕಾರಿ, ತುರುವೇಕೆರೆ, ಚಿ.ನಾ.ಹಳ್ಳಿ ತಾಲೂಕಿಗೆ ಸಿ.ಡಿ.ಪಿ.ಓ. ಚಿ.ನಾ.ಹಳ್ಳಿ,  ಕೊರಟಗೆರೆ ತಾಲೂಕಿಗೆ ಸಹಾಯಕ ನಿರ್ದೇಶಕರು, ಕೃಷಿ ಇಲಾಖೆ, ಕೊರಟಗೆರೆ, ಶಿರಾ ತಾಲೂಕಿಗೆ ಕಾರ್ಯನಿರ್ವಾಹಣಾಧಿಕಾರಿ ತಾಲೂಕು ಪಂಚಾಯತಿ ಶಿರಾ ಮತ್ತು ಪಾವಗಡ ತಾಲೂಕಿಗೆ ಬಿ.ಇ.ಓ. ಪಾವಗಡ ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಅವರು ವಿವರಿಸಿದರು.  ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷೆ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಇರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಅವಧಿ ಮುಗಿಯುವವರೆಗೆ ಮುಚ್ಚಲು ಕ್ರಮ ಕೈಗೊಳ್ಳಲು ಆಯಾ ತಾಲೂಕಿನ ತಹಶೀಲ್ದಾರರು ಕ್ರಮ ಜರುಗಿಸುವಂತೆ ಅವರು ತಿಳಿಸಿದರು.
ಹೊಸದಾಗಿ 22124 ವಿದ್ಯಾರ್ಥಿಗಳು, 3561 ಪುನರಾವರ್ತಿತ ವಿದ್ಯಾರ್ಥಿಗಳು, 939 ಖಾಸಗಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟಾರೆ 26624 ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗೆ ಹಾಜರಾಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯೊಳಗೆ ನಿಷೇಧಾಜ್ಞೆ ಜಾರಿಗೊಳಿಸಲು ಜಿಲ್ಲಾಧಿಕಾರಿಗಳನ್ನು ಕೋರಲಾಗುವುದು
-  ಗೋವಿಂದರಾಜು
ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement