ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಚುನಾವಣಾ ನೀತಿ ಸಂಹಿತೆ ಪಾಲಿಸಲು ಕರೆ

Srinivasa Murthy VN
Updated On : 10 Mar 2014, 1:51 am

ಗುಬ್ಬಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು ಈ ಅವಧಿಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು, ಅಧಿಕಾರಿಗಳು, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಸಹಾಯಕ ಚುನಾವಣಾಧಿಕಾರಿ ಹನುಮನರಸಯ್ಯ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಾಹೀರಾತು ಫಲಕಗಳನ್ನು ಕೂಡಲೇ ತೆಗೆಯುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಗುಬ್ಬಿ ತಾಲೂಕಿನ ಎರಡು ಕಡೆಗಳಲ್ಲಿ ಚೆಕ್ ಪ್‌ಸ್ಟ್‌ಗಳನ್ನು
ತೆರೆಯಲಾಗುವುದು ಅಲ್ಲದೆ, ತಾಲೂಕು ಮಟ್ಟದ ಅಧಿಕಾರಿಗಳ ನೇತೃತ್ವದ ವಿಶೇಷ ಜಾಗೃತ ತಂಡಗಳನ್ನು ರಚಿಸಲಾಗಿದೆ. ಮತಪಟ್ಟಿಯಲ್ಲಿ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ಅವಕಾಶವಿದ್ದು ಮತದಾರರು ಸದರಿ ಪಟ್ಟಿಗಳನ್ನು ಪರಿಶೀಲಿಸಿಕೊಂಡು ಹೆಸರುಗಳು ಕೈಬಿಟ್ಟಿದ್ದಲ್ಲಿ ಅರ್ಹ ಮತದಾರರು ತಮ್ಮ ಹೆಸರನ್ನು ಬಿಎಲ್‌ಓ ಗಳಿಗೆ ಅಗತ್ಯ ಮಾಹಿತಿ ನೀಡಿ ಸೇರ್ಪಡೆ ಮಾಡಿಕೊಳ್ಳುವಂತೆ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement