ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಬಡ ವಿದ್ಯಾರ್ಥಿಗಳಿಗೆ ವಂಚನೆ: ಆರೋಪ

Vishwanath S
Updated On : 12 Mar 2014, 1:27 am

ಪಾವಗಡ: ಕಿತ್ತೂರು ರಾಣಿ ಚನ್ನಮ್ಮ ಮತ್ತು ಮೊರಾರ್ಜಿ ದೇಸಾಯಿ ವಸತಿ ವಿದ್ಯಾರ್ಥಿ ನಿಲಯಗಳು ಅವ್ಯವಸ್ಥೆಯಿಂದ ಕೂಡಿದ್ದು 18 ಲೀಟರ್ ಬದಲಿಗೆ ಪ್ರತಿ ದಿನ ಕೇವಲ 8 ಲೀಟರ್ ಹಾಲು ವಿತರಿಸಿ ಪ್ರಾಂಶುಪಾಲರು ಬಡ ವಿದ್ಯಾರ್ಥಿಗಳಿಗೆ ವಂಚಿಸುತ್ತಿದ್ದಾರೆಂದು ಇಲ್ಲಿನ ದಲಿತ ಸಂಘಟನೆ ಪದಾಧಿಕಾರಿಗಳು ಆರೋಪಿಸಿದ್ದಾರೆ. ಪಟ್ಟಣದ ಹೊರ ವಲಯದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಮತ್ತು ಮೊರಾರ್ಜಿ ದೇಸಾಯಿ ವಸತಿ ವಿದ್ಯಾರ್ಥಿ ನಿಲಯಗಳು ಸೇರಿದಂತೆ ಈ ಎರಡು ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಂಶುಪಾಲರು ಕಳಪೆ ಗುಣಮಟ್ಟದ ಆಹಾರ ವಿತರಣೆ ಮಾಡುತ್ತಿದ್ದು ವಿದ್ಯಾರ್ಥಿಗಳಿಗೆ ವಂಚಿಸುತ್ತಿದ್ದಾರೆಂದು ವಿದ್ಯಾರ್ಥಿ ಒಕ್ಕೂಟದ ಮುಖಂಡ ವಳ್ಳೂರು ನಾಗೇಶ್ ಆರೋಪಿಸಿದ್ದಾರೆ.
ಕಿತ್ತೂರು ರಾಣಿ ಚನ್ನಮ್ಮ ಹಾಗೂ ಮೊರಾರ್ಜಿ  ವಸತಿ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಕೊಳೆತ ತರಕಾರಿ ಹಾಗೂ ಕೆಳ ದರ್ಜೆಯ ಅಕ್ಕಿ ಮತ್ತು ಎಣ್ಣೆಯಿಂದ ತಯಾರಿಸಿದ ಕಳಪೆ ಆಹಾರ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವುದು ಕಂಡು ಬಂದಿದ್ದು 2 ಹಾಸ್ಟೆಲ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 250 ಮಂದಿ ಬಡ ವಿದ್ಯಾರ್ಥಿಗಳಿಗೆ 18 ಲೀಟರ್‌ಗಳ ಹಾಲು ವಿತರಣೆ ಬದಲು ಕೇವಲ 8ಲೀಟರ್ ಹಾಲು ವಿತರಿಸಿ ಪ್ರತಿ ದಿನ 18ಲೀಟರ್ ಹಾಲು ವಿತರಿಸುವುದಾಗಿ ದಾಖಲೆಯಲ್ಲಿ ನಮೂದಿಸಿ ವಿದ್ಯಾರ್ಥಿಗಳಿಗೆ ವಂಚಿಸುತ್ತಿದ್ದಾರೆ ಎಂದು ಅವರು ದೂರಿದರು. ಪಟ್ಟಣದ ಈ 2 ವಿದ್ಯಾರ್ಥಿ ನಿಲಯಗಳು ಅವ್ಯವಸ್ಥೆಯಿಂದ ಕೂಡಿದ್ದು ತನಿಖೆ ಮಾಡಿ ನಿಯಮನುಸಾರ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕರಿಸಿ ಎಂದು ಸಂಬಂಧಪಟ್ಟ ಜಿಪಂ ಸಿಇಒ ಮತ್ತು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಲ್ಲಿ ದಲಿತ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement