ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಶ್ರೀದೇವಿ ವೈದ್ಯಕೀಯ ಕಾಲೇಜಿನಲ್ಲಿ ಕ್ಷಯರೋಗ ನಿಯಂತ್ರಣ ಕಾರ್ಯಾಗಾರ

Vishwanath S
Updated On : 12 Mar 2014, 1:26 am

ಕ.ಪ್ರ.ವಾರ್ತೆ ,  ತುಮಕೂರು ,  ಮಾ.11
ತುಮಕೂರಿನ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಸಗಿ ಮತ್ತು ಸರ್ಕಾರಿ ವೈದ್ಯರುಗಳಿಗೆ ಕ್ಷಯರೋಗ ನಿಯಂತ್ರಣ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದ ಸಂಯುಕ್ತಾಶ್ರಯದಲ್ಲಿ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಾಗಾರದ ಹಿನ್ನೆಲೆಯಲ್ಲಿ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಪಾವಗಡದ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಸ್ವಾಮಿ ಜಪಾನಂದರು ಉದ್ಘಾಟಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ಷಯರೋಗದ ಬಗ್ಗೆ ಇರುವ ಅಭಿಪ್ರಾಯ, ಹಾಗೂ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಮುಖ್ಯ ಅತಿಥಿಗಳಾಗಿ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಸಿ.ಎಂ. ಗುರುಮೂರ್ತಿ ನಿರಂತರ ವೈದ್ಯಕೀಯ ಶಿಕ್ಷಣದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಡಾ. ವಿಜಯ್ ತುಬಾಕಿ ಕ್ಷಯರೋಗದ ಬಗ್ಗೆ ವಿಶೇಷ ಉಪನ್ಯಾಸವನ್ನು ಶ್ರವಣ ಮತ್ತು ದೃಶ್ಯ ಮಾಧ್ಯಮಗಳ ಮೂಲಕ ಸಭೆಗೆ ವಿವರಿಸಿದರು.
ಡಾ.ಎಂ.ಸಿ. ಕೃಷ್ಣ, ಡಾ.ಟಿ.ಎಂ. ವೀರಭದ್ರಯ್ಯ, ಡಾ. ಸನತ್ ಕುಮಾರ್ ಮಾತನಾಡಿದರು.
ಅಧ್ಯಕ್ಷತೆಯನ್ನು ಶ್ರೀದೇವಿ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ರಮಣ್ ಎಂ. ಹುಲಿನಾಯ್ಕರ್ ವಹಿಸಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚನ್ನಮಲ್ಲಯ್ಯ ಸ್ವಾಗತಿಸಿ, ಡಾ. ಬಿಂದು ಮಾದವ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement