ಮತದಾನದ ಹಕ್ಕು ಪಡೆದ ವಿದ್ಯಾರ್ಥಿಗಳು ತಪ್ಪದೇ ಮತದಾನ ಮಾಡಲಿ: ಆಂಜಿನಪ್ಪ
ಪಾವಗಡ ಮತದಾನದ ಹಕ್ಕು ಪಡೆದ ವಿದ್ಯಾರ್ಥಿಗಳು ತಪ್ಪದೇ ಮತದಾನ ಮಾಡಬೇಕು ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕರ ಕಚೇರಿ ಡಿಡಿಪಿಐ ಅಂಜನಪ್ಪ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಬುಧವಾರ ಪಟ್ಟಣದ ವೈ.ಇ.ಆರ್.ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತ ಚಲಾಯಿಸುವುದು
ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕಿಗಾಗಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ವೈ.ಎಸ್. ಹನುಮಂತರಾಯಪ್ಪ ಮಾತನಾಡಿ ಸರ್ಕಾರದ ನಿಯಮನುಸಾರ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡ ವಿದ್ಯಾರ್ಥಿಗಳು ತಪ್ಪದೇ ಮತದಾನ ಮಾಡಬೇಕು.
ಮತದಾನ ಮಾಡುವುದು ನಮ್ಮ ಹಕ್ಕಾಗಿದ್ದು ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡುವಂತೆ ವಿದ್ಯಾರ್ಥಿಗಳಿಗೆ ಸಲಹೆಯಿತ್ತರು.
ತಹಸೀಲ್ದಾರ್ ಅಲ್ತಾಫ್ ಪಾಷ, ಬಿಇಒ ಬಿ.ಪಿ. ನಾಗರಾಜ್, ತಾ.ಸಮಾಜ ಕಲ್ಯಾಣಾಧಿಕಾರಿ ಚೌದರಿ ಹಾಗೂ ಇತರೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮತದಾನದ ಅರಿವು ಮೂಡಿಸಿ ಮತದಾನ ಮಾಡಲು ಸಲಹೆ ನೀಡಿದರು.